ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ವಜಾ

ಪಿಟಿಐ
Published 30 ಅಕ್ಟೋಬರ್ 2023, 14:11 IST
Last Updated 30 ಅಕ್ಟೋಬರ್ 2023, 14:11 IST
ಮನೀಶ್‌ ಸಿಸೋಡಿಯಾ
ಮನೀಶ್‌ ಸಿಸೋಡಿಯಾ    

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಎಎಪಿ ನಾಯಕ ಮನೀಶ್‌ ಸಿಸೋಡಿಯಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌.ವಿ.ಎನ್‌. ಭಟ್ಟಿ ಅವರಿದ್ದ ನ್ಯಾಯಪೀಠವು, ತನಿಖಾ ಸಂಸ್ಥೆಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ವಿಚಾರಣೆಯು ಆರರಿಂದ ಎಂಟು ತಿಂಗಳಲ್ಲಿ ಮುಕ್ತಾಯವಾಗಲಿದೆ. ಒಂದು ವೇಳೆ ಮೂರು ತಿಂಗಳಲ್ಲಿ ವಿಚಾರಣೆಯು ಮಂದಗತಿಯಲ್ಲಿ ನಡೆಯುತ್ತಿದೆ ಎಂದು ಅನಿಸಿದಾಗ ಸಿಸೋಡಿಯಾ ಅವರು ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿತು.

ಅಬಕಾರಿ ನೀತಿ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮನೀಶ್‌ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.