ADVERTISEMENT

ದೆಹಲಿ ಅಬಕಾರಿ ಹಗರಣ: ಸಂಜಯ್ ಸಿಂಗ್ ಇ.ಡಿ ಕಸ್ಟಡಿ ಅವಧಿ ವಿಸ್ತರಣೆ

ಪಿಟಿಐ
Published 10 ಅಕ್ಟೋಬರ್ 2023, 12:44 IST
Last Updated 10 ಅಕ್ಟೋಬರ್ 2023, 12:44 IST
<div class="paragraphs"><p>ಸಂಜಯ್ ಸಿಂಗ್ ಅವರನ್ನು ಬಂಧಿಸಿದ ದೆಹಲಿ&nbsp; ಪೊಲೀಸರು&nbsp;</p></div>

ಸಂಜಯ್ ಸಿಂಗ್ ಅವರನ್ನು ಬಂಧಿಸಿದ ದೆಹಲಿ  ಪೊಲೀಸರು 

   

(ಚಿತ್ರ ಕೃಪೆ–ಪಿಟಿಐ)

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ ಅವಧಿಯನ್ನು ಇಲ್ಲಿನ ನ್ಯಾಯಾಲಯ ಅಕ್ಟೋಬರ್ 13ರವರೆಗೆ ವಿಸ್ತರಿಸಿದೆ.

ADVERTISEMENT

ಕೇಂದ್ರ ತನಿಖಾ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್, ಈ ಆದೇಶ ನೀಡಿದ್ದಾರೆ. ಸಂಜಯ್ ಸಿಂಗ್ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ ಇ.ಡಿ ಕಸ್ಟಡಿ ವಿಚಾರಣೆಯನ್ನು ಐದು ದಿನಗಳ ಕಾಲ ವಿಸ್ತರಿಸುವಂತೆ ಕೋರಿತ್ತು.

2021-22ರ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಆರೋಪದಡಿ ಸಂಜಯ್‌ ಅವರನ್ನು ಬುಧವಾರ ಇ.ಡಿ ಬಂಧಿಸಿದೆ. ಇವರು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಂತರ ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಎರಡನೇ ಪ್ರಮುಖ ನಾಯಕರಾಗಿದ್ದಾರೆ. ಇದು ದೆಹಲಿ ಆಡಳಿತ ಪಕ್ಷಕ್ಕೆ ದೊಡ್ಡ ಆಘಾತ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.