ADVERTISEMENT

ದೆಹಲಿ ಅಬಕಾರಿ ಹಗರಣ: ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಪಿಟಿಐ
Published 4 ಫೆಬ್ರುವರಿ 2023, 10:52 IST
Last Updated 4 ಫೆಬ್ರುವರಿ 2023, 10:52 IST
ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ   

ನವದೆಹಲಿ: ದೆಹಲಿ ಅಬಕಾರಿ ಗುತ್ತಿಗೆ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು, ಶನಿವಾರ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ದೆಹಲಿ ಅಬಕಾರಿ ಗುತ್ತಿಗೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಸಲ್ಲಿಸಿರುವ ಪೂರಕ ಚಾರ್ಜ್‌ಶೀಟ್‌ನಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಹೆಸರಿಸಿದೆ.

ಕೇಜ್ರಿವಾಲ್ ಅವರಿಗೆ ನೈತಿಕತೆ ಇದ್ದರೆ ತಕ್ಷಣವೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ದೆಹಲಿ ಬಿಜೆಪಿ ಕಾರ್ಯಾಧ್ಯಕ್ಷ ವೀರೇಂದ್ರ ಸಚ್‌ದೇವ್‌ ಆಗ್ರಹಿಸಿದ್ದಾರೆ.

ಈ ಕುರಿತು ಎಎಪಿ ನಾಯಕರು ತಕ್ಷಣಕ್ಕೆ ಪ್ರತಿಕ್ರಿಯೆಗೆ ಲಭ್ಯರಾಗಿಲ್ಲ.

ಸಿಎಂ ಕೇಜ್ರಿವಾಲ್ ಅವರ ರಕ್ಷಣೆಯ ಅಡಿಯಲ್ಲಿ ಅಬಕಾರಿ ಹಗರಣ ನಡೆದಿದೆ. ಇದೀಗ ಇ.ಡಿ ಚಾರ್ಜ್‌ಶೀಟ್‌ನಲ್ಲಿ ಎಲ್ಲವೂ ಬಯಲಾಗಿದೆ ಎಂದು ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ರಾಮ್‌ವೀರ್ ಸಿಂಗ್ ಬಿಧೂಢಿ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.