ಪ್ರವಾಹ ಪೀಡಿತ ಪ್ರದೇಶದಲ್ಲಿ ಸಿಎಂ ರೇಖಾ ಗುಪ್ತಾ
– ಪಿಟಿಐ ಚಿತರ
ನವದೆಹಲಿ: ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ. ಒಂದೆರಡು ದಿನಗಳಲ್ಲಿ ಯಮುನಾ ನದಿಯ ನೀರಿನ ಮಟ್ಟ ಕಡಿಮೆಯಾಗಲಿದೆ ಎಂದು ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ಮಂಗಳವಾರ ಹೇಳಿದ್ದಾರೆ.
ಯಮುನಾ ಬಜಾರ್ ಸುತ್ತಮುತ್ತಲಿನ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಮಳೆಯಂದಾಗಿ ನೀರು ಪ್ರವೇಶಿಸಿದ ಮನೆಗಳನ್ನು ಪರಿಶೀಲನೆ ನಡೆಸಿದರು. ಮಳೆಯಿಂದಾಗಿ ತೊಂದರೆಗೊಳಗಾದವರೊಂದಿಗೆ ಮಾತುಕತೆ ನಡೆಸಿದರು.
‘ಪರಿಹಾರ ಶಿಬಿರಗಳು ಸ್ಥಾಪಿಸಲಾದ ಶಾಲೆಗೆ ಸ್ಥಳಾಂತರಗೊಳ್ಳಲು ನಾವು ಅವರನ್ನು ವಿನಂತಿಸಿದ್ದೇವೆ. ಅಲ್ಲಿ ಆಹಾರ ಮತ್ತು ವೈದ್ಯಕೀಯ ಪರಿಹಾರಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ವಿದ್ಯುತ್ ಸಮಸ್ಯೆ ಇದೆ ಎಂದು ನಿರಾಶ್ರಿತರು ಹೇಳಿದ್ದರು. ಆದ್ದರಿಂದ, ರಾತ್ರಿಯಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಸೌರಶಕ್ತಿಯಿಂದ ಚಾಲಿತ ಫ್ಲಡ್‌ಲೈಟ್‌ಗಳಿಗೆ ನಾವು ವ್ಯವಸ್ಥೆ ಮಾಡಿದ್ದೇವೆ’ ಎಂದು ಗುಪ್ತಾ ವರದಿಗಾರರಿಗೆ ತಿಳಿಸಿದ್ದಾರೆ.
ದೆಹಲಿಯ ಹಳೆಯ ರೈಲ್ವೆ ಸೇತುವೆಯಲ್ಲಿ ಯಮುನಾ ನದಿಯಲ್ಲಿ ನೀರಿನ ಮಟ್ಟವು ಮಂಗಳವಾರ ಬೆಳಿಗ್ಗೆ 8 ಗಂಟೆಗೆ 205.79 ಮೀಟರ್ ತಲುಪಿದೆ. ಸೋಮವಾರ ಮಧ್ಯಾಹ್ನ ಅದು 205.55 ಮೀಟರ್ ತಲುಪಿತ್ತು, ಇದು 205.33 ಮೀಟರ್ ದಾಟಿದರೆ ಅಪಾಯದ ಮಟ್ಟ ಎಂದು ಪರಿಗಣಿಸಲಾಗುತ್ತದೆ.
ನೀರು ಹರಿಯುತ್ತಿದೆ, ನಿಶ್ಚಲವಾಗಿಲ್ಲ. ನೀರಿನ ಮಟ್ಟ ಹೆಚ್ಚಾಗಿದೆ ಆದರೆ ಒಂದು ಅಥವಾ ಎರಡು ದಿನಗಳಲ್ಲಿ ಅದು ಕಡಿಮೆಯಾಗಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ ಎಂದು ಗುಪ್ತಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.