ನವದೆಹಲಿ: ಚಾಲಕನ ನಿಯಂತ್ರಣ ತಪ್ಪಿದ ಕಾರಣ ಕಾರೊಂದು ಫ್ಲೈಓವರ್ ರಸ್ತೆಯಿಂದ ರೈಲ್ವೆ ಹಳಿ ಮೇಲೆ ಉರುಳಿ ಬಿದ್ದಿರುವ ಘಟನೆ ಉತ್ತರ ದೆಹಲಿಯ ಹೊರವಲಯದ ಹೈದರಪುರ ಮೆಟ್ರೊ ನಿಲ್ದಾಣದ ಸಮೀಪದಲ್ಲಿ ನಡೆದಿದೆ.
ಮುಕರ್ಬಾ ಚೌಕ್ ಫ್ಲೈಓವರ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರೈಲ್ವೆ ಹಳಿ ಮೇಲೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಜಿಯಾಬಾದ್‌ನ ಕಾರು ಚಾಲಕ ಸಚಿನ್ ಚೌಧರಿ (35) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅವರಿಗೆ ಚಿಕಿತ್ಸೆ ಒದಗಿಸಲಾಗಿದೆ.
ಸಮಯಪುರ ಬದ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೆಲವೇ ಹೊತ್ತಿನಲ್ಲಿ ರೈಲ್ವೆ ಹಳಿಯಿಂದ ಕಾರನ್ನು ತೆರವುಗೊಳಿಸಲಾಯಿತು. ರೈಲ್ವೆ ಸಂಚಾರಕ್ಕೆ ತೊಂದರೆ ಎದುರಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.