ADVERTISEMENT

ಕೊರೊನಾ ವೈರಸ್‌ ನಿಯಂತ್ರಿಸಲು ದೆಹಲಿ ಸರ್ಕಾರದಿಂದ ‘5 ಟಿ’ ಸೂತ್ರಗಳು

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2020, 7:53 IST
Last Updated 7 ಏಪ್ರಿಲ್ 2020, 7:53 IST
   

ನವದೆಹಲಿ: ಕೊರೊನಾ ವೈರಸ್‌ ನಿಯಂತ್ರಿಸಲು ದೆಹಲಿ ಸರ್ಕಾರವು ಐದು ಪ್ರಮುಖ ಕ್ರಮಗಳನ್ನು ಜಾರಿಗೆ ತರುತ್ತಿರುವುದಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.

ಸರ್ಕಾರದ ಕ್ರಮಗಳನ್ನು5 ಟಿ ಗಳ ಯೋಜನೆ (5 Ts plan –Testing, Tracing, Treatment, Teamwork, Tracking)ಎಂದು ಸಿಎಂ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.

ಪರೀಕ್ಷೆ ಮಾಡುವುದು, ರೋಗ ಪತ್ತೆಹಚ್ಚುವುದು, ಚಿಕಿತ್ಸೆ ನೀಡುವುದು, ತಂಡವಾಗಿಕೆಲಸ ಮಾಡುವುದು, ನಿಗಾ ವಹಿಸುವುದೇ 5 ಟಿ ಸೂತ್ರ ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ADVERTISEMENT

ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಈ ಯೋಜನೆಯನ್ನು ಕಾರ್ಯ ರೂಪಕ್ಕೆ ತರುತ್ತಿರುವುದಾಗಿ ಅವರು ಹೇಳಿದ್ದಾರೆ.

ದೆಹಲಿಗೆ 27000 ಪಿಪಿಇ ಕಿಟ್ ಒದಗಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದೂ ಇದೇ ವೇಳೆ ಅರವಿಂದ ಕೇಜ್ರಿವಾಲ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.