ADVERTISEMENT

’ನಿರ್ಭಯಾ’ ಪ್ರಕರಣ: ಆರೋಪಿ ಮುಕೇಶ್ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ದೆಹಲಿ ಸರ್ಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜನವರಿ 2020, 6:41 IST
Last Updated 16 ಜನವರಿ 2020, 6:41 IST
ನಿರ್ಭಯಾ ಪ್ರಕರಣದ ಆರೋಪಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ.
ನಿರ್ಭಯಾ ಪ್ರಕರಣದ ಆರೋಪಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ.   

ನವದೆಹಲಿ: ‘ನಿರ್ಭಯಾ’ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಮುಕೇಶ್ ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ.

ತಿರಸ್ಕೃತ ಅರ್ಜಿಯನ್ನು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಕಚೇರಿಗೆ ಸರ್ಕಾರ ಕಳಿಸಿಕೊಟ್ಟಿದೆ. ಅಲ್ಲಿಂದ ಕೇಂದ್ರ ಗೃಹ ಸಚಿವಾಲಯಕ್ಕೆ ರವಾನಿಸಲಾಗಿದೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಅಪರಾಧಿಯೊಬ್ಬ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ2012ರ ‘ನಿರ್ಭಯಾ’ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಈ ಹಿಂದೆ ಘೋಷಿಸಿದ್ದಂತೆ ಜ.22ರಂದು ಮರಣದಂಡನೆ ಜಾರಿ ಮಾಡಲು ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ ನಿನ್ನೆಯಷ್ಟೇ (ಜ.15) ಸ್ಪಷ್ಟಪಡಿಸಿತ್ತು.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.