ADVERTISEMENT

ದೆಹಲಿ: ಜನವರಿ 18 ರಿಂದ 10 ಮತ್ತು 12ನೇ ತರಗತಿ ತೆರೆಯಲು ಅನುಮತಿ

ಪಿಟಿಐ
Published 13 ಜನವರಿ 2021, 10:39 IST
Last Updated 13 ಜನವರಿ 2021, 10:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೆಹಲಿಯ ಎಲ್ಲಾ ಶಾಲೆಗಳಿಗೆ ಜನವರಿ 18 ರಿಂದ 10 ಮತ್ತು 12 ನೇ ತರಗತಿಗಳನ್ನು ತೆರೆಯಲು ಅಲ್ಲಿನ ಸರ್ಕಾರ ಬುಧವಾರ ಅನುಮತಿ ನೀಡಿದೆ ಎಂದು ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದರು.

‘ಬೋರ್ಡ್‌ ಪರೀಕ್ಷೆಗಳ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ. ದೈಹಿಕ ಹಾಜರಾತಿ ಕಡ್ಡಾಯವಲ್ಲ. ಹಾಗಾಗಿ ಪೋಷಕರ ಅನುಮತಿಯಿದ್ದಲ್ಲಿ ಮಾತ್ರ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಬಹುದು. ಈ ವೇಳೆ ಶಾಲೆಗಳು ಕೋವಿಡ್‌–19 ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ಬೋರ್ಡ್‌ ‍ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಎಲ್ಲಾ ಶಾಲೆಗಳು ಜನವರಿ 18 ರಿಂದ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳನ್ನು ಹಾಜರಾಗುವಂತೆ ಸೂಚಿಸಬಹದು’ ಎಂದು ಅವರು ಹೇಳಿದರು.

ADVERTISEMENT

‘ಮಕ್ಕಳ ಹಾಜರಾತಿಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು. ಆದರೆ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವ ಆಯ್ಕೆ ಪೋಷಕರಿಗೆ ಬಿಟ್ಟಿದ್ದು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.