ನವದೆಹಲಿ: ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದ ಕಾರಣ, ದೆಹಲಿ ಸರ್ಕಾರವು ನಿರ್ಮಾಣ ಚಟುವಟಿಕೆ ಮತ್ತು ಹಳೆಯ ಕಟ್ಟಡಗಳನ್ನು ನೆಲಸಮಗೊಳಿಸುವ ಮೇಲೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿದೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಸೋಮವಾರ ತಿಳಿಸಿದ್ದಾರೆ.
ಶಾಲೆ ಪುನರಾರಂಭಗೊಳಿಸುವ ಬಗ್ಗೆ ಮತ್ತು ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರ ಇದೇ 24ರಂದು ನಿರ್ಧಾರ ಕೈಗೊಳ್ಳಲಿದೆ ಎಂದು ರಾಯ್ ತಿಳಿಸಿದ್ದಾರೆ.
ಸಿಎನ್‌ಜಿ ಮೂಲಕ ಸಂಚರಿಸುವ ಟ್ರಕ್‌ಗಳಿಗೆ ದೆಹಲಿಯೊಳಗೆ ಅವಕಾಶ ನೀಡುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ. ನವೆಂಬರ್ 26ರವರೆಗೆ ಇವುಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.