ADVERTISEMENT

ದೆಹಲಿ: ಕ್ರೀಡಾಂಗಣ, ಕ್ರೀಡಾ ಸಂಕೀರ್ಣ ತೆರೆಯಲು ಅನುಮತಿ

ಪಿಟಿಐ
Published 4 ಜುಲೈ 2021, 8:14 IST
Last Updated 4 ಜುಲೈ 2021, 8:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ದೆಹಲಿ ಸರ್ಕಾರವು ಸೋಮವಾರದಿಂದ ಕ್ರೀಡಾಂಗಣ ಮತ್ತು ಕ್ರೀಡಾ ಸಂಕೀರ್ಣಗಳನ್ನು ಪುನಃ ತೆರೆಯಲು ಅನುಮತಿ ನೀಡಿದೆ. ಆದರೆ, ಪ್ರೇಕ್ಷಕರಿಗೆ ಅವಕಾಶ ಇರುವುದಿಲ್ಲ.

‘ಕ್ರೀಡಾಂಗಣಗಳು ಮತ್ತು ಕ್ರೀಡಾ ಸಂಕೀರ್ಣಗಳು ಕೋವಿಡ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ದೆಹಲಿ ಮೆಟ್ರೊ ಮತ್ತು ಬಸ್‌ಗಳು ಶೇಕಡ 50ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲಿವೆ’ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು(ಡಿಡಿಎಂಎ) ಆದೇಶದಲ್ಲಿ ತಿಳಿಸಿದೆ.

‘ಚಿತ್ರ ಮಂದಿರಗಳು, ಮಲ್ಟಿಪ್ಲೆಕ್ಸ್‌, ಈಜುಕೊಳ, ಸ್ಪಾಗಳು, ಶಾಲಾ–ಕಾಲೇಜುಗಳು ಮುಚ್ಚಿರಲಿವೆ. ಅಲ್ಲದೆ ರಾಜಕೀಯ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಭೆ–ಸಮಾರಂಭಗಳ ಮೇಲಿನ ನಿರ್ಬಂಧವೂ ಮುಂದುವರಿಯಲಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.