ADVERTISEMENT

‘ದೆಹಲಿ: ಬಸ್, ಮೆಟ್ರೊ ಪ್ರಯಾಣಮಹಿಳೆಯರಿಗೆ ಉಚಿತ’

ಏಜೆನ್ಸೀಸ್
Published 3 ಜೂನ್ 2019, 20:01 IST
Last Updated 3 ಜೂನ್ 2019, 20:01 IST
   

ನವದೆಹಲಿ (ಪಿಟಿಐ): ದೆಹಲಿಯಲ್ಲಿ ಮಹಿಳೆಯರಿಗೆ ಬಸ್ ಹಾಗೂ ಮೆಟ್ರೊ ಪ್ರಯಾಣ ಉಚಿತಗೊಳಿಸಲು ಸರ್ಕಾರ ಮುಂದಾಗಿದ್ದು, 2–3 ತಿಂಗಳಲ್ಲಿ ಯೋಜನೆ ಜಾರಿಗೊಳ್ಳಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಬೆನ್ನಲ್ಲೇ ದೆಹಲಿ ಸರ್ಕಾರದಿಂದ ಇಂತಹ ಪ್ರಸ್ತಾವ ಹೊರಬಿದ್ದಿದೆ.

‘ದೆಹಲಿ ಸಾರಿಗೆ ನಿಗಮದ (ಡಿಟಿಸಿ) ಬಸ್‌ಗಳು ಹಾಗೂ ದೆಹಲಿ ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗುತ್ತದೆ. ಇದರ ವೆಚ್ಚವನ್ನು ಸರ್ಕಾರ ಭರಿಸಲಿದೆ’ ಎಂದು ಕೇಜ್ರಿವಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ADVERTISEMENT

‘ಈ ಆರ್ಥಿಕ ವರ್ಷದಲ್ಲಿ ಯೋಜನೆಗೆ ಅಂದಾಜು ₹700ರಿಂದ ₹800 ಕೋಟಿ ಖರ್ಚಾಗಲಿದೆ. ಪ್ರಸ್ತಾವ ಕುರಿತು ಅಧ್ಯಯನ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸಲುಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇದಾದ ಬಳಿಕ ವಿಧಾನಸಭೆಯಲ್ಲಿ ಪ್ರಸ್ತಾವ ಮಂಡಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ. ಯೋಜನೆ ಕುರಿತುಅಭಿಪ್ರಾಯಗಳನ್ನು ತಿಳಿಸುವಂತೆ ಸಾರ್ವಜನಿಕರಿಗೂ ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.