ADVERTISEMENT

ದೆಹಲಿ | ಕೋವಿಡ್ ಪ್ರಕರಣಗಳ ಏರಿಕೆ; ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆ

ಪಿಟಿಐ
Published 14 ಏಪ್ರಿಲ್ 2022, 13:26 IST
Last Updated 14 ಏಪ್ರಿಲ್ 2022, 13:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ/ನೋಯ್ಡಾ: ಕೋವಿಡ್‌ ಪ್ರಕರಣಗಳು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವೇ ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆಗೊಳಿಸಲಾಗುವುದು ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಗುರುವಾರ ಹೇಳಿದ್ದಾರೆ.

ದೆಹಲಿಯ ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿರುವ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಸಿಸೋಡಿಯಾ ಈ ಹೇಳಿಕೆ ನೀಡಿದ್ದಾರೆ.

‘ಶಾಲೆಗೆ ಹೋಗುತ್ತಿರುವ ತಮ್ಮ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ಕೆಲ ಪೋಷಕರು ನನಗೆ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆಯು ಶಾಲೆಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಶುಕ್ರವಾರವೇ ಮಾರ್ಗಸೂಚಿ ಬಿಡುಗಡೆಗೊಳಿಸಲಿದೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಅಲ್ಪ ಪ್ರಮಾಣದಲ್ಲಿ ಪ್ರಕರಣಗಳು ಏರಿಕೆಯಾಗುತ್ತಿವೆ. ಆದರೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಏರಿಕೆಯಾಗಿಲ್ಲ. ಆದ್ದರಿಂದ ಈ ಬಗ್ಗೆ ಜನರುಆತಂಕ ಪಡುವ ಅಗತ್ಯವಿಲ್ಲ. ಆದಗ್ಯೂ ಎಚ್ಚರಿಕೆಯಿಂದ ಇರಬೇಕು’ ಎಂದು ಸಲಹೆ ನೀಡಿದ್ದಾರೆ.

15 ಮಕ್ಕಳಿಗೆ ಸೋಂಕು: ಉತ್ತರ ಪ್ರದೇಶದ ಗೌತಮ ಬುದ್ಧ ನಗರದಲ್ಲಿ 15 ಮಕ್ಕಳು ಸೇರಿ 44 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು ಸಂಖ್ಯೆ 121ಕ್ಕೆ ಏರಿಕೆಯಾಗಿದೆ ಎಂದು ಇಲ್ಲಿನ ಆರೋಗ್ಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.