
ಗುಂಡಿನ ದಾಳಿ (ಸಾಂದರ್ಭಿಕ ಚಿತ್ರ)
ನವದೆಹಲಿ: ಜಿಮ್‌ವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿರುವ ಘಟನೆ ದೆಹಲಿಯ ಹೊರವಲಯದ ಪಶ್ಚಿಮ ವಿಹಾರ್‌ನಲ್ಲಿ ನಡೆದಿದೆ.
ಭಾನುವಾರ ಮತ್ತು ನಿನ್ನೆ ರಾತ್ರಿ ನಡೆದ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೊತ್ತುಕೊಂಡಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದೆ. ನಮ್ಮ ಗ್ಯಾಂಗ್ ಜಿಮ್ ಮಾಲೀಕರಿಗೆ ಕರೆ ಮಾಡಿದಾಗ ಉತ್ತರಿಸದ ಕಾರಣ ಈ ದಾಳಿ ಮಾಡಿದ್ದೇವೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ.
ಸಾಮಾಜಿಕ ಮಾಧ್ಯಮದ ಪೋಸ್ಟ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರ್.ಕೆ ಜಿಮ್‌ನಲ್ಲಿ ನಡೆದ ಗುಂಡಿನ ದಾಳಿ ಬಗ್ಗೆ ಮಾಹಿತಿ ಪಡೆದ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು. ಸಾಕ್ಷ್ಯಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡಗಳು ಸಹ ಹಾಜರಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.