ADVERTISEMENT

UPSC ಪೂರ್ವಭಾವಿ ಪರೀಕ್ಷೆ ಕೀ ಉತ್ತರ ಕೋರಿದ್ದ ಅರ್ಜಿ ಪರಿಶೀಲನೆಗೆ ಕೋರ್ಟ್ ಸಮ್ಮತಿ

ಪಿಟಿಐ
Published 13 ಸೆಪ್ಟೆಂಬರ್ 2023, 16:12 IST
Last Updated 13 ಸೆಪ್ಟೆಂಬರ್ 2023, 16:12 IST

ನವದೆಹಲಿ: ಈ ವರ್ಷದ ಆರಂಭದಲ್ಲಿ ನಡೆದ ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಕೀ ಉತ್ತರ ಪ್ರಕಟಿಸಲು ಕೋರಿ, ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ 17 ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಲು ದೆಹಲಿ ಹೈಕೋರ್ಟ್ ಬುಧವಾರ ಸಮ್ಮತಿಸಿದೆ.

ಅರ್ಜಿ ವಿಚಾರಣೆಗೆ ಪರಿಗಣಿಸಿದ ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ಅವರು, ಅಭ್ಯರ್ಥಿಗಳ ಕೋರಿಕೆ ಕಾನೂನುಬದ್ಧ ಮತ್ತು ನ್ಯಾಯಸಮ್ಮತವಾಗಿಯೇ ಇದೆ ಎಂದು ಹೇಳಿದ್ದಾರೆ.

ಅಂತಿಮ ಫಲಿತಾಂಶ ಪ್ರಕಟಿಸಿದ ಮೇಲೆಯೇ ಕೀ ಉತ್ತರ ಪ್ರಕಟಿಸುವುದು ಎಂದು ಜೂನ್‌ ತಿಂಗಳಲ್ಲಿ ಯುಪಿಎಸ್‌ಸಿ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು.   

ADVERTISEMENT

ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಬೇಕಾದ ಅಂಕಗಳನ್ನು ಗಳಿಸದೇ ಅನರ್ಹರಾದ ಅಭ್ಯರ್ಥಿಗಳು ಯುಪಿಎಸ್‌ಸಿಯ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.