ADVERTISEMENT

ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ನಿಷೇಧಕ್ಕೆ ನಕಾರ

ಪಿಟಿಐ
Published 9 ಜನವರಿ 2019, 19:57 IST
Last Updated 9 ಜನವರಿ 2019, 19:57 IST
ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್‌ ಚಿತ್ರದ ದೃಶ್ಯ
ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್‌ ಚಿತ್ರದ ದೃಶ್ಯ   

ನವದೆಹಲಿ: ‘ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರ ಹಾಗೂ ಅದರ ಟ್ರೇಲರ್‌ ಅನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್)ದೆಹಲಿ ಹೈಕೋರ್ಟ್ ಬುಧವಾರ ತಳ್ಳಿಹಾಕಿದೆ.

ಸಾಂವಿಧಾನಿಕ ಹುದ್ದೆಯಾದ ಪ್ರಧಾನಿ ಸ್ಥಾನಕ್ಕೆ ಚಿತ್ರದಿಂದ ಅಪಮಾನವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಅರ್ಜಿ ಸಲ್ಲಿಸಿರುವಲ್ಲಿ ಕೇವಲಅರ್ಜಿದಾರರ ವೈಯಕ್ತಿಕ ಹಿತಾಸಕ್ತಿ ಅಡಗಿದೆ ಎಂದು ವಿಚಾರಣೆ ವೇಳೆನ್ಯಾಯಮೂರ್ತಿ ವಿ.ಕೆ. ರಾವ್ಹೇಳಿದ್ದಾರೆ.

ADVERTISEMENT

ಪಿಐಎಲ್‌ನಲ್ಲಿ ನಮ್ಮನ್ನು ಪ್ರತಿವಾದಿಗಳನ್ನಾಗಿ ಮಾಡಿಲ್ಲ. ಆದ್ದರಿಂದ ನಮ್ಮ ನಿಲುವು ಕೇಳದೆ ಯಾವುದೇ ಆದೇಶ ಹೊರಡಿಸಬಾರದು ಎಂದು ಚಿತ್ರದ ನಿರ್ಮಾಪಕರು ವಿಚಾರಣೆ ವೇಳೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.