
ನವದೆಹಲಿ: ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಹಿಜ್ಬುಲ್ ಮುಜಾಹಿದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಅವರ ಪುತ್ರರಿಬ್ಬರು ಮತ್ತು ಇತರರ ವಿರುದ್ಧ ದೋಷಾರೋಪ ನಿಗದಿ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ವಿವೇಕ್ ಚೌಧರಿ ಮತ್ತು ಮನೋಜ್ ಜೈನ್ ಅವರ ನೇತೃತ್ವದ ನ್ಯಾಯಪೀಠವು ಮಂಗಳವಾರ ಆರೋಪಿಗಳ ಮನವಿಯನ್ನು ತಿರಸ್ಕರಿಸಿದೆ.
ವಿಚಾರಣಾ ನ್ಯಾಯಾಲಯವೊಂದು 2021ರಲ್ಲಿ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ ಮಾಡಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.
2011ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲಾಹುದ್ದೀನ್ ಪುತ್ರರಾದ ಶಹೀದ್ ಯೂಸುಫ್‌ನನ್ನು 2017ರಲ್ಲಿ ಮತ್ತು ಸೈಯದ್ ಅಹ್ಮದ್ ಶಕೀಲ್‌ನನ್ನು 2018ರಲ್ಲಿ ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.