ನವದೆಹಲಿ: 12ರಿಂದ 17 ವರ್ಷ ವಯಸ್ಸಿನವರಿಗೂ ಕೋವಿಡ್ ಲಸಿಕೆ ನೀಡುವ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ನೋಟಿಸ್ ನೀಡಿದೆ.
12ರಿಂದ 17 ವರ್ಷ ವಯಸ್ಸಿನವರಿಗೆ ಮತ್ತು ಈ ವಯಸ್ಸಿನ ಮಕ್ಕಳ ತಂದೆ–ತಾಯಿಗೆ ತಕ್ಷಣವೇ ಲಸಿಕೆ ನೀಡಲು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ಕುರಿತು ಕೋರ್ಟ್ ವಿಚಾರಣೆ ನಡೆಸಿದೆ. ಬಳಿಕ ಸರ್ಕಾರಕ್ಕೆ ನೋಟಿಸ್ ನೀಡಿದೆ ಎಂದು ‘ಎಎನ್‌ಐ’ ಟ್ವೀಟ್ ಮಾಡಿದೆ.
ನವಜಾತ ಶಿಶುಗಳ ತಂದೆ–ತಾಯಿಗೆ ಕೂಡ ತಕ್ಷಣವೇ ಲಸಿಕೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದೂ ಅರ್ಜಿದಾರರು ಮನವಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.