
ಪಿಟಿಐ
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿ ಇರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮಗೆ ವಕೀಲರ ಜೊತೆ ವರ್ಚುವಲ್ ಆಗಿ ಇನ್ನಷ್ಟು ಸಭೆಗಳನ್ನು ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ.
ಕೇಜ್ರಿವಾಲ್ ಕೋರಿಕೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ತಿಹಾರ್ ಜೈಲಿನ ಅಧಿಕಾರಿಗಳು ವಿರೋಧಿಸಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.