ADVERTISEMENT

ಸತ್ಯೇಂದ್ರ ಜೈನ್‌ ಅನರ್ಹಗೊಳಿಸಲು ಕೋರಿ ಪಿಐಎಲ್‌: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಪಿಟಿಐ
Published 16 ಆಗಸ್ಟ್ 2022, 12:37 IST
Last Updated 16 ಆಗಸ್ಟ್ 2022, 12:37 IST
ದೆಹಲಿ ಹೈಕೋರ್ಟ್‌
ದೆಹಲಿ ಹೈಕೋರ್ಟ್‌   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸಚಿವ ಸತ್ಯೇಂದ್ರ ಜೈನ್‌ ಅವರನ್ನು ‘ಅಸ್ವಸ್ಥ ಮನಸ್ಸಿನ ವ್ಯಕ್ತಿ’ ಎಂಬುದಾಗಿ ಘೋಷಿಸಬೇಕು ಹಾಗೂ ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಸಲಾದ ಪಿಐಎಲ್‌ಗೆ ಸಂಬಂಧಿಸಿದ ತೀರ್ಪನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ಕಾಯ್ದಿರಿಸಿತು.

‘ಈ ಸಂಬಂಧ ಸೂಕ್ತ ಆದೇಶವನ್ನು ನೀಡಲಾಗುವುದು’ ಎಂದು ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್‌ ಅವರಿದ್ದ ನ್ಯಾಯಪೀಠ ಹೇಳಿತು.

ಆಶೀಶ್‌ಕುಮಾರ್ ಶ್ರೀವಾಸ್ತವ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ. ‘ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದೇನೆ ಎಂಬುದಾಗಿ ಸತ್ಯೇಂದ್ರ ಜೈನ್‌ ಅವರು ವಿಚಾರಣಾ ನ್ಯಾಯಾಲಯದಲ್ಲಿ ಹೇಳಿರುವುದು ವರದಿಯಾಗಿದೆ. ಹೀಗಾಗಿ, ಶಾಸಕನಾಗಿ ಮುಂದುವರಿಯಲು ಜೈನ್‌ ಅವರಿಗೆ ಅನುಮತಿ ನೀಡಬಾರದು’ ಎಂದು ಶ್ರೀವಾಸ್ತವ ಅವರು ಪಿಐಎಲ್‌ನಲ್ಲಿ ಕೋರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.