ADVERTISEMENT

ಹೊಸ ಐಟಿ ನಿಯಮ: ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ದೆಹಲಿ ಹೈಕೋರ್ಟ್‌ ನೋಟಿಸ್‌

ಪಿಟಿಐ
Published 9 ಮಾರ್ಚ್ 2021, 9:27 IST
Last Updated 9 ಮಾರ್ಚ್ 2021, 9:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಹೊಸ ಮಾಹಿತಿ ತಂತ್ರಜ್ಞಾನ (ಮಧ್ಯಸ್ಥ ಸಂಸ್ಥೆಗಳಿಗೆ ಮಾರ್ಗಸೂಚಿ ಮತ್ತು ಡಿಜಿಟಲ್ ಮಾಧ್ಯಮಕ್ಕೆ ನೀತಿ ಸಂಹಿತೆ) ನಿಯಮಗಳು–2021 ಅನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವಅರ್ಜಿಗೆ ಪ್ರತಿಕ್ರಿಯಿಸುವಂತೆ ದೆಹಲಿ ಹೈಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್.ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠವು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯಕ್ಕೆ ಪ್ರತಿಕ್ರಿಯಿಸುವಂತೆ ನೋಟಿಸ್‌ ನೀಡಿತು.

‘ಫೌಂಡೇಷನ್ ಫಾರ್ ಇಂಡಿಪೆಂಡೆಂಟ್ ಜರ್ನಲಿಸಂ’ ಈ ಕುರಿತು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕೇಂದ್ರ ಸರ್ಕಾರ ಫೆಬ್ರುವರಿ 25ರಂದು ಪ್ರಕಟಿಸಿರುವ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳು, ಕಾನೂನುಬಾಹಿರವಾಗಿ ಡಿಜಿಟಲ್‌ ಸುದ್ದಿ ಮಾಧ್ಯಮವನ್ನು ನಿಯಂತ್ರಿಸಲು ಮುಂದಾಗುತ್ತವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ADVERTISEMENT

ಈ ನಿಯಮಗಳು ಡಿಜಿಟಲ್ ಸುದ್ದಿ ಮಾಧ್ಯಮಗಳಿಗೆ ಆಳವಾದ ಮತ್ತು ಗಂಭೀರವಾದ ಹಾನಿ ಮಾಡುತ್ತದೆ. ಅಲ್ಲದೆ ಅವರ ಹಕ್ಕುಗಳನ್ನು ನಾಶಪಡಿಸುತ್ತವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.