ADVERTISEMENT

ದ್ವೇಷ ಭಾಷಣ: ದೆಹಲಿ ಹೈಕೋರ್ಟ್ ವಕೀಲೆಯರ ವೇದಿಕೆಯಿಂದ ಸಿಜೆಐಗೆ ಪತ್ರ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2023, 15:48 IST
Last Updated 17 ಆಗಸ್ಟ್ 2023, 15:48 IST
-
-   

ನವದೆಹಲಿ: ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವುದು ಹಾಗೂ ಭಯದ ವಾತಾವರಣ ನಿರ್ಮಿಸುವಂತಹ ಭಾಷಣಗಳಿರುವ ವಿಡಿಯೊಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ದೆಹಲಿ ಹೈಕೋರ್ಟ್‌ ಮಹಿಳಾ ವಕೀಲರ ವೇದಿಕೆ ಒತ್ತಾಯಿಸಿದೆ.

ಈ ಕುರಿತು ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರಿಗೆ ವೇದಿಕೆಯು ಪತ್ರ ಬರೆದಿದೆ.

ನೂಹ್‌ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೋಮು ಗಲಭೆಗಳ ಹಿನ್ನೆಲೆಯಲ್ಲಿ ಬರೆದಿರುವ ಈ ಪತ್ರಕ್ಕೆ 101 ವಕೀಲೆಯರು ಸಹಿ ಹಾಕಿದ್ದಾರೆ.

ADVERTISEMENT

‘ಯಾವುದೇ ಸಮುದಾಯ, ಪೂಜಾ ಸ್ಥಳಗಳಿಗೆ ಬೆದರಿಕೆ ಒಡ್ಡುವ ಅಥವಾ ಆರ್ಥಿಕ ಬಹಿಷ್ಕಾರಕ್ಕೆ ಒತ್ತಾಯಿಸುವ ವಿಡಿಯೊಗಳನ್ನು ಪತ್ತೆ ಮಾಡಬೇಕು ಹಾಗೂ ನಿಷೇಧಿಸಬೇಕು ಎಂಬುದಾಗಿ ಹರಿಯಾಣ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.