ADVERTISEMENT

ದೆಹಲಿ ಆರೋಗ್ಯ ಸಚಿವ ಸತ್ಯೇಂದರ್‌ ಜೈನ್‌ ಗುಣಮುಖ

ಪಿಟಿಐ
Published 26 ಜೂನ್ 2020, 15:59 IST
Last Updated 26 ಜೂನ್ 2020, 15:59 IST
ಸತ್ಯೇಂದರ್‌ ಜೈನ್‌
ಸತ್ಯೇಂದರ್‌ ಜೈನ್‌   

ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್‌ ಜೈನ್‌ ಗುಣಮುಖರಾಗಿದ್ದು, ಶುಕ್ರವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೂನ್‌ 17ಕ್ಕೆ ಅವರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ರಾಜೀವ್‌ ಗಾಂಧಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ಜೈನ್‌ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟ ಕಾರಣ ಜೂನ್‌ 19ರಂದು ಅವರನ್ನು ಮ್ಯಾಕ್ಸ್‌ ಆಸ್ಪತ್ರೆಯ ಐಸಿಯುಗೆ ಸ್ಥಳಾಂತರಿಸಲಾಗಿತ್ತು.ಇದಾದ ನಂತರ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಅವರು ಒಳಗಾಗಿದ್ದರು.

‘ಅವರ ಆರೋಗ್ಯ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಸೋಂಕು ಇಲ್ಲದೇ ಇರುವುದು ದೃಢಪಟ್ಟಿದೆ’ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.