ADVERTISEMENT

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ನ್ಯಾಯಾಂಗ ಬಂಧನ ಅವಧಿ 2 ವಾರ ವಿಸ್ತರಣೆ

ಹಣ ಅಕ್ರಮ ವರ್ಗಾವಣೆ ಪ್ರಕರಣ

ಪಿಟಿಐ
Published 27 ಜೂನ್ 2022, 12:24 IST
Last Updated 27 ಜೂನ್ 2022, 12:24 IST
 ಸಚಿವ ಸತ್ಯೇಂದ್ರ ಜೈನ್‌
 ಸಚಿವ ಸತ್ಯೇಂದ್ರ ಜೈನ್‌   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ಯಾಯಾಂಗ ಬಂಧನ ಅವಧಿಯನ್ನು ಇನ್ನೂ ಎರಡು ವಾರ ವಿಸ್ತರಿಸಲಾಗಿದೆ.

ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಕೋರಿ ಜಾರಿ ನಿರ್ದೇಶನಾಲಯದ (ಇ.ಡಿ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರು ಈ ಆದೇಶ ಹೊರಡಿಸಿದ್ದಾರೆ.

57 ವರ್ಷದ ಜೈನ್ ಅವರನ್ನು ಇ.ಡಿ ಮೇ 30ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿತ್ತು. ಕಳೆದ ವಾರ ಆಮ್ಲಜನಕ ಪ್ರಮಾಣ ಕುಸಿದ ಹಿನ್ನೆಲೆಯಲ್ಲಿ ಜೈನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.