ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
–ಪಿಟಿಐ ಚಿತ್ರ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜೈತಾಪುರದ ಹರಿನಗರದ ಮೋಹನ್ ಬಾಬಾ ಮಂದಿರ ಬಳಿ ಗೋಡೆ ಕುಸಿದ ಪರಿಣಾಮ ಎಂಟು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಸಂಬಂಧ ಬೆಳಿಗ್ಗೆ 9.16ಕ್ಕೆ ಅಗ್ನಿಶಾಮಕ ಇಲಾಖೆಗೆ ಮಾಹಿತಿ ಬಂದಿತು. ಕೂಡಲೇ ಮೂರು ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳದಲ್ಲಿ ಪೊಲೀಸರು ಸೇರಿದಂತೆ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ದೆಹಲಿ-ಎನ್‌ಸಿಆರ್‌ನ ಹಲವು ಭಾಗಗಳಲ್ಲಿ ಶುಕ್ರವಾರ ರಾತ್ರಿಯಿಡೀ ಭಾರಿ ಮಳೆಯಾಗಿತ್ತು. ಇಂದು (ಶನಿವಾರ) ಕೂಡಾ ವರುಣಾರ್ಭಟ ಮುಂದುವರಿದಿರುವ ಕಾರಣ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.