ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಕೆಲವು ಪ್ರದೇಶಗಳು ಜಲಾವೃತವಾಗಿವೆ. ವಾಹನ ಸಂಚಾರರು ಟ್ರಾಫಿಕ್‌ನಲ್ಲಿ ಸಿಲುಕಿ ದೀರ್ಘಾವಧಿ ಪರದಾಡಿದರು.
ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ದೆಹಲಿಯಾದ್ಯಂತ ‘ಆರೆಂಜ್ ಅಲರ್ಟ್’ ನೀಡಿದೆ.
ರ‍್ಯಾಡಿಸನ್ ಹೋಟೆಲ್ ಮೇಲ್ಸೇತುವೆ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಬಳಿಯ ತಿಕೋನಾ ಪಾರ್ಕ್, ಮಹಾತ್ಮ ಗಾಂಧಿ ರಸ್ತೆ ಮತ್ತಿತರ ಕಡೆಗಳಲ್ಲಿ ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನಗಳ ದಟ್ಟಣೆ ಉಂಟಾಯಿತು. ರಾಜಾ ಗಾರ್ಡನ್ ಚೌಕ್, ಹರಿನಗರ ಮತ್ತಿತರ ಪ್ರದೇಶಗಳು ಜಲಾವೃತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.