ನವದೆಹಲಿ: ಪೊಲೀಸರು ಮತ್ತು ಅಧಿಕಾರಿಗಳ ಎಚ್ಚರಿಕೆ ನಡುವೆಯೂ ದೆಹಲಿಯ ಟಿಕ್ರಿ ಗಡಿಯಲ್ಲಿ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿಭಟನಾ ಸ್ಥಳದಲ್ಲಿ ಭಾರಿ ಭದ್ರತೆಯನ್ನು ಕಲ್ಪಿಸಲಾಗಿದೆ. ಜತೆಗೆ, ಗಾಜಿಪುರ ಮತ್ತು ಸಿಂಘು ಗಡಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಗಣರಾಜ್ಯೋತ್ಸವ ದಿನದಂದು ರೈತರ ನಡೆಸಿದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ಘಟನೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.