ADVERTISEMENT

ಜಾಮಿಯಾ ವಿದ್ಯಾರ್ಥಿನಿ ಸಫೂರಾ ಜರ್ಗಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು 

ಏಜೆನ್ಸೀಸ್
Published 23 ಜೂನ್ 2020, 12:36 IST
Last Updated 23 ಜೂನ್ 2020, 12:36 IST
ಸಫೂರಾ ಜರ್ಗರ್
ಸಫೂರಾ ಜರ್ಗರ್   

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ, ರಾಷ್ಟ್ಪೀಯ ಜನಸಂಖ್ಯಾ ನೋಂದಣಿ ವಿರುದ್ಧ ಪ್ರತಿಭಟನೆ ವೇಳೆ ಈಶಾನ್ಯ ದೆಹಲಿಯಲ್ಲಿ 2020 ಫೆಬ್ರುವರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧಿಯಾಗಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿನಿ ಸಫೂರಾ ಜರ್ಗರ್ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿದೆ.

ಪಿಎಚ್‌ಡಿ ವಿದ್ಯಾರ್ಥಿನಿಯಾಗಿರುವ ಸಫೂರಾ 6 ತಿಂಗಳ ಗರ್ಭಿಣಿಯಾಗಿದ್ದು ಮಾನವೀಯತೆಯ ದೃಷ್ಟಿಯಲ್ಲಿ ಅವರಿಗೆ ಜಾಮೀನು ನೀಡಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ.

27 ಹರೆಯದ ಸಫೂರಾ ಅವರನ್ನು ಏಪ್ರಿಲ್ 10ರಂದುದೆಹಲಿ ಪೊಲೀಸರ ವಿಶೇಷ ತಂಡ ಬಂಧಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.