ADVERTISEMENT

ಭ್ರಷ್ಟಾಚಾರ ಆರೋಪ | ಆತಿಶಿ ಆಯ್ಕೆ ಪ್ರಶ್ನಿಸಿ ಅರ್ಜಿ ಸಲ್ಲಿಕೆ: ದೆಹಲಿ HC ನೋಟಿಸ್

ಪಿಟಿಐ
Published 26 ಮಾರ್ಚ್ 2025, 7:19 IST
Last Updated 26 ಮಾರ್ಚ್ 2025, 7:19 IST
ಆತಿಶಿ
ಆತಿಶಿ   

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂಬ ಆರೋಪದ ಆಧಾರದ ಮೇಲೆ ಎಎಪಿ ನಾಯಕಿ, ಮಾಜಿ ಮುಖ್ಯಮಂತ್ರಿ ಆತಿಶಿ ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಕುರಿತಂತೆ ದೆಹಲಿ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

ಕಲ್ಕಾಜಿ ಕ್ಷೇತ್ರದ ನಿವಾಸಿಗಳಾದ ಕಮಲಜಿತ್ ಸಿಂಗ್ ದುಗ್ಗಲ್ ಮತ್ತು ಆಯುಷ್ ರಾಣಾ ಅವರು ಆತಿಶಿ ಅವರ ಆಯ್ಕೆಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜತೆಗೆ, ಆತಿಶಿ ಮತ್ತು ಅವರ ಚುನಾವಣಾ ಏಜೆಂಟ್‌ಗಳು ಚುನಾವಣೆಯ ಸಮಯದಲ್ಲಿ ಭ್ರಷ್ಟಾಚಾರ ವೆಸಗಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರು, ಚುನಾವಣಾ ಆಯೋಗ, ದೆಹಲಿ ಪೊಲೀಸರು ಮತ್ತು ಆತಿಶಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಜತೆಗೆ, ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ನಿಗದಿಪಡಿಸಿದ್ದಾರೆ.

ADVERTISEMENT

ಫೆಬ್ರುವರಿ 5ರಂದು ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಎದುರು 3,521 ಮತಗಳಿಂದ ಗೆಲುವು ಸಾಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.