ADVERTISEMENT

ಪರ್ವೇಶ್‌ ವರ್ಮಾ ಆಯ್ಕೆ ಪ್ರಶ್ನಿಸಿ ಅರ್ಜಿ: ದೆಹಲಿ ಹೈಕೋರ್ಟ್ ನೋಟಿಸ್‌

ಪಿಟಿಐ
Published 26 ಮಾರ್ಚ್ 2025, 9:38 IST
Last Updated 26 ಮಾರ್ಚ್ 2025, 9:38 IST
<div class="paragraphs"><p>ಪರ್ವೇಶ್‌ ವರ್ಮಾ </p></div>

ಪರ್ವೇಶ್‌ ವರ್ಮಾ

   

ಪಿಟಿಐ

ನವದೆಹಲಿ: 2025ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ನವದೆಹಲಿ ಕ್ಷೇತ್ರದಿಂದ ಪರ್ವೇಶ್‌ ವರ್ಮಾ ಅವರ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಬುಧವಾರ ನೋಟಿಸ್‌ ಜಾರಿ ಮಾಡಿದೆ.

ADVERTISEMENT

ಪರ್ವೇಶ್‌ ವರ್ಮಾ ಅವರ ಆಯ್ಕೆಯನ್ನು ಪ್ರಶ್ನಿಸಿ ವಿಶ್ವನಾಥ ಅಗರ್ವಾಲ್‌ ಎಂಬವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸಿದ್ದ ತಮಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಿರಲಿಲ್ಲ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಈ ಚುನಾವಣೆಯನ್ನು ಅನೂರ್ಜಿತಗೊಳಿಸಿ ಹೊಸದಾಗಿ ಚುನಾವಣೆ ನಡೆಸಲು ನಿರ್ದೇಶಿಸುವಂತೆ ನ್ಯಾಯಾಲಯವನ್ನು ಅವರು ಕೋರಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರು ನೋಟಿಸ್‌ ನೀಡಿದ್ದು, ಚುನಾವಣಾ ಆಯೋಗ ಮತ್ತು ಅದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಎಪಿ ನಾಯಕ ಅರವಿಂದ್‌ ಕೇಜ್ರಿವಾಲ್‌, ಕಾಂಗ್ರೆಸ್‌ ನಾಯಕ ಸಂದೀಪ್‌ ದೀಕ್ಷಿತ್‌, ಸೇರಿದಂತೆ 23 ಅಭ್ಯರ್ಥಿಗಳಿಂದ ಪ್ರತಿಕ್ರಿಯೆ ಕೇಳಿದ್ದಾರೆ.

ಮುಂದಿನ ವಿಚಾರಣೆಯನ್ನು ಮಾರ್ಚ್‌ 27ಕ್ಕೆ ನಿಗದಿ ಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.