ಕೋರ್ಟ್
ನವದೆಹಲಿ: ವಿವಾಹದ ನಂತರ ಮಹಿಳೆಯು ತನ್ನ ಪತಿಯ ಮನೆಯಲ್ಲಿ ನೆಲಸುವ ಹಕ್ಕನ್ನು ಪಡೆಯುತ್ತಾಳೆ. ಪತಿಯನ್ನು ಆತನ ಪೋಷಕರು ಮನೆಯಿಂದ ಹೊರಹಾಕಿದರೂ ಸೊಸೆಯು ಆ ಮನೆಯಲ್ಲಿ ಇರುವ ಹಕ್ಕನ್ನು ಹೊಂದಿರುತ್ತಾಳೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮಹಿಳೆಯ ಅತ್ತೆ ಮತ್ತು ಮಾವ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಂಜೀವ್ ನರೂಲಾ ಅವರು ವಜಾಗೊಳಿಸಿ, ಈ ಅಭಿಪ್ರಾಯ ವ್ಯಕ್ತಪಡಿಸಿದರು. ಕಾನೂನು ಪ್ರಕ್ರಿಯೆಯ ಮೂಲಕ ಮಾತ್ರ ಸೊಸೆಯನ್ನು ಮನೆಯಿಂದ ಹೊರಹಾಕಬಹುದು ಎಂದು ತಿಳಿಸಿದರು.
ಪ್ರಕರಣ ಏನು?:
2010ರಲ್ಲಿ ಅರ್ಜಿದಾರರ ಮಗನ ವಿವಾಹವಾಗಿತ್ತು. ಬಳಿಕ ದಂಪತಿ ಮತ್ತು ಅರ್ಜಿದಾರರು ಒಂದೇ ಮನೆಯಲ್ಲಿ ವಾಸವಿದ್ದರು. ಒಂದು ವರ್ಷದ ಬಳಿಕ ಸಂಬಂಧ ಹಳಸಿ, ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಪರಸ್ಪರ ದಾಖಲಿಸಿಕೊಂಡಿದ್ದರು. ಈ ಮಧ್ಯೆ ಅರ್ಜಿದಾರರು, ತಾವು ವಾಸವಿರುವ ನಿವಾಸವು ಸ್ವಯಾರ್ಜಿತ ಎಂದು ಕೋರ್ಟ್ ಮೆಟ್ಟಿಲೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.