ADVERTISEMENT

ವಿವಿ ಸಿಬ್ಬಂದಿ ವೆಚ್ಚ ವಿದ್ಯಾರ್ಥಿಗಳಿಂದ ವಸೂಲು ಬೇಡ: ದೆಹಲಿ ಹೈಕೋರ್ಟ್

ಏಜೆನ್ಸೀಸ್
Published 24 ಜನವರಿ 2020, 12:45 IST
Last Updated 24 ಜನವರಿ 2020, 12:45 IST
   

ನವದೆಹಲಿ: ವಿಶ್ವವಿದ್ಯಾಲಯದಗುತ್ತಿಗೆ ಸಿಬ್ಬಂದಿಗೆ ತಗುಲುವ ವೆಚ್ಚವನ್ನುವಿದ್ಯಾರ್ಥಿಗಳಿಂದ ವಸೂಲು ಮಾಡಬಾರದು, ಶೈಕ್ಷಣಿಕ ಕ್ಷೇತ್ರವನ್ನು ಕಡೆಗಣಿಸದೆ ಸಾರ್ವಜನಿಕ ಶಿಕ್ಷಣ ಕ್ಷೇತ್ರಕ್ಕೆ ಹಣಕಾಸು ಸೌಲಭ್ಯ ಒದಗಿಸಿಕೊಡಬೇಕು, ಅಲ್ಲದೆ, ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌‌ಯು) ಮುಂದಿನ ಸೆಮಿಸ್ಟರ್‌ಗೆ ಯಾರು ನೋಂದಣಿ ಮಾಡಿಕೊಂಡಿಲ್ಲವೋ ಅಂತಹ ವಿದ್ಯಾರ್ಥಿಗಳಿಗೆ ಮತ್ತೊಂದು ವಾರ ಕಾಲಾವಕಾಶ ನೀಡಬೇಕೆಂದು ದೆಹಲಿ ಹೈಕೋರ್ಟ್ ಹೇಳಿದೆ.

ಶುಕ್ರವಾರ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ರಾಜಿವ್ ಶಕ್ದರ್, ಹೊಸ ಶುಲ್ಕ ಹೆಚ್ಚಳವನ್ನು ವಿದ್ಯಾರ್ಥಿಗಳಿಗೆ ಪಡೆಯದೆ, ಹಳೆಯ ಶುಲ್ಕವನ್ನು ಪಾವತಿಸಲು ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದೆ.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಐಶೆ ಘೋಷ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಹೈಕೋರ್ಟ್ ಗೆ ಮನವಿ ಸಲ್ಲಿಸಿ ಶುಲ್ಕಹೆಚ್ಚಳವನ್ನು ತೆಗೆದುಹಾಕುವಂತೆ ಹಾಗೂ ಮುಂದಿನ ಸೆಮಿಸ್ಟರ್‌‌ಗೆ ಕಾಲಾವಕಾಶ ನೀಡುವಂತೆ ಕೋರಿದ್ದರು.ಇದಕ್ಕೂ ಮುನ್ನ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್, ಈಗಾಗಲೇ ಶೇ.90ರಷ್ಟು ವಿದ್ಯಾರ್ಥಿಗಳು ಹೊಸದಾಗಿ ಶುಲ್ಕ ಹೆಚ್ಚಳ ಅನ್ವಯ ಪ್ರವೇಶ ಪಡೆದಿದ್ದಾರೆ. ಇದರಿಂದಾಗಿ ಈ ಅರ್ಜಿಯನ್ನು ವಜಾ ಮಾಡುವಂತೆ ಆಗ್ರಹಿಸಿದ್ದರು.

ADVERTISEMENT

ಸಾಲಿಸಿಟರ್ ಜನರಲ್ ಅವರ ವಾದವನ್ನು ಒಪ್ಪದ ನ್ಯಾಯಾಧೀಶರು, ನಿಮಗೆ ಬೇರೆ ಆಯ್ಕೆಗಳು ಇಲ್ಲದಿದ್ದರೆ, ನೀವು ಏನು ಮಾಡುತ್ತೀರಿ ಎಂದು ಪ್ರಶ್ನಿಸಿದರು. ಅಲ್ಲದೆ, ಸರ್ಕಾರಿ ವಕೀಲರು ನಿಯಮದಂತೆ ಶುಲ್ಕ ಹೆಚ್ಚಿಸಲಾಗಿದೆ. ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿಯನ್ನು ಗುತ್ತಿಗೆಯ ಆಧಾರದ ಮೇಲೆ ನಿಯೋಜಿಸಲಾಗುತ್ತಿದೆ. ಇದಕ್ಕಾಗಿ ಹಣಕಾಸು ಹೊಂದಿಸಲು ಶುಲ್ಕಹೆಚ್ಚಳ ಅನಿವಾರ್ಯ ಎಂದರು.

ಆಗ ನ್ಯಾಯಾಧೀಶರು, ಗುತ್ತಿಗೆ ಸಿಬ್ಬಂದಿಗೆ ತಗುಲುವ ವೆಚ್ಚವನ್ನುವಿದ್ಯಾರ್ಥಿಗಳಿಂದ ವಸೂಲು ಮಾಡಬಾರದು,ಸರ್ಕಾರ ಶೈಕ್ಷಣಿಕ ಕ್ಷೇತ್ರಕ್ಕೆ ಹಣಕಾಸಿನ ನೆರವು ನೀಡಬೇಕು. ಈ ಕ್ಷೇತ್ರವನ್ನು ಕಡೆಗಣಿಸಬಾರದು ಎಂದು ಹೇಳಿ, ವಿದ್ಯಾರ್ಥಿಗಳಿಗೆ ಒಂದು ವಾರ ಕಾಲಾವಕಾಶ ನೀಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.