ಸಾವು
ಪ್ರಾತಿನಿಧಿಕ ಚಿತ್ರ
ದೆಹಲಿ: ತನ್ನ ಪತ್ನಿ ಹೆಚ್ಚಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕಾಲ ಕಳೆಯುತ್ತಾಳೆ ಎಂದು ಅಸಮಾಧಾನಗೊಂಡಿದ್ದ ಪತಿಯೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯಲ್ಲಿ ಸೋಮವಾರ ನಡೆದಿದೆ.
ದೆಹಲಿಯ ಹಳೆ ರೋಷನ್‌ಪುರದಲ್ಲಿ ಈ ಘಟನೆ ನಡೆದಿದ್ದು ನಜಾಫ್‌ಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶದ ಪಿಲಿಭಿತ್ ಮೂಲದ ಅಮನ್ (35) ಎಂಬ ಆಟೊ ಚಾಲಕ ಹಳೆ ರೋಷನ್‌ಪುರದಲ್ಲಿ ತನ್ನ 30 ವರ್ಷದ ಪತ್ನಿ ಹಾಗೂ ಇಬ್ಬರು ಮಕ್ಕಳೊಡನೆ ನೆಲೆಸಿದ್ದರು. ಪತ್ನಿ ಇತ್ತೀಚೆಗೆ ಹೆಚ್ಚಾಗಿ ಇನ್‌ಸ್ಟಾಗ್ರಾಂ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಾಲಕಳೆಯುತ್ತಾರೆ ಎಂದು ಪತ್ನಿಯನ್ನು ಅಮನ್ ಕೊಲೆ ಮಾಡಿದ್ದ. ಕೊಲೆಯ ನಂತರ ತಾನೂ ವಿಷ ಸೇವಿಸಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಸ್ಥಳೀಯರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿಯ ಮೊಬೈಲ್ ಗೀಳಿನ ಸಂಬಂಧ ಇಬ್ಬರಿಗೂ ಆಗಾಗ ವಾಗ್ವಾದ ನಡೆಯುತ್ತಿತ್ತು. ಅಮನ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸದ್ಯ ಆತ ಆರ್‌ಎಂಎಚ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.