ADVERTISEMENT

Terror Attack: ಪಹಲ್ಗಾಮ್ ದಾಳಿ ಬೆನ್ನಲ್ಲೇ ದೆಹಲಿಯಲ್ಲಿ ಕಟ್ಟೆಚ್ಚರ

ಪಿಟಿಐ
Published 23 ಏಪ್ರಿಲ್ 2025, 4:42 IST
Last Updated 23 ಏಪ್ರಿಲ್ 2025, 4:42 IST
   

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಪಟ್ಟಣದ ಸಮೀಪ ಇರುವ ಹುಲ್ಲುಗಾವಲಿನಲ್ಲಿ ಉಗ್ರರು ಮಂಗಳವಾರ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ 28 ಮಂದಿ ಮೃತಪಟ್ಟು, ಸಾಕಷ್ಟು ಜನರು ಗಾಯಗೊಂಡಿದ್ದಾರೆ. 2019ರಲ್ಲಿ ನಡೆದ ಪುಲ್ವಾಮಾ ದಾಳಿಯ ಬಳಿಕ ಕಣಿವೆಯಲ್ಲಿ ಉಗ್ರರು ನಡೆಸಿದ ಭೀಕರ ದಾಳಿ ಇದಾಗಿದೆ.

ಪಹಲ್ಗಾಮ್‌ ದಾಳಿಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ದೆಹಲಿ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಮುಖ್ಯವಾಗಿ ಪ್ರವಾಸಿ ತಾಣಗಳು, ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಣ್ಗಾವಲು ಮತ್ತು ತಪಾಸಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ADVERTISEMENT

ಸೂಕ್ಷ್ಮ ವಯಲಗಳಲ್ಲಿ ಸಂಚಾರವನ್ನು ನಿಯಂತ್ರಿಸಲಾಗಿದೆ ಎಂದೂ ಹೇಳಿದ್ದಾರೆ.

ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಅವರು ನಾಲ್ಕು ದಿನಗಳ ಭೇಟಿ ಸಲುವಾಗಿ ಭಾರತದಲ್ಲಿ ಇರುವುದರಿಂದ ದೆಹಲಿ ಮಾತ್ರವಲ್ಲದೆ ಇತರ ನಗರಗಳಲ್ಲಿಯೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಸಾವಿನ ಸಂಖ್ಯೆ ಖಚಿತವಾಗಿಲ್ಲ
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು, 'ಇತ್ತೀಚಿನ ದಿನಗಳಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ' ಎಂದಿದ್ದಾರೆ. ಹಾಗೆಯೇ, ಸಾವಿನ ಸಂಖ್ಯೆ ಇನ್ನೂ ಖಚಿತವಾಗಿಲ್ಲ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.