ADVERTISEMENT

ದೆಹಲಿಯಲ್ಲಿ ಎರಡು ಅಂತಸ್ತಿನ ಹಳೆಯ ಕಟ್ಟಡ ಕುಸಿತ: ಇಬ್ಬರು ಸಾವು

ಪಿಟಿಐ
Published 21 ಮಾರ್ಚ್ 2024, 2:44 IST
Last Updated 21 ಮಾರ್ಚ್ 2024, 2:44 IST
<div class="paragraphs"><p>ಎರಡು ಅಂತಸ್ತಿನ ಕಟ್ಟಡ ಕುಸಿದಿರುವುದು</p></div>

ಎರಡು ಅಂತಸ್ತಿನ ಕಟ್ಟಡ ಕುಸಿದಿರುವುದು

   

ನವದೆಹಲಿ: ಎರಡು ಅಂತಸ್ತಿನ ಹಳೆಯ ಕಟ್ಟಡ ಕುಸಿದ ಪರಿಣಾಮ ಇಬ್ಬರು ಕಾಮಿರ್ಕರು ಮೃತಪಟ್ಟು ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಇಲ್ಲಿನ ಕಬೀರ್‌ ನಗರದಲ್ಲಿ ಗುರುವಾರ ಮುಂಜಾನೆ ಈ ಘಟನೆ ಸಂಭವಿಸಿದೆ.

ADVERTISEMENT

ಮೃತ ಕಾರ್ಮಿಕರನ್ನು ಅರ್ಷದ್ (30) ಮತ್ತು ತೌಹಿತ್‌ (20) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಕಾರ್ಮಿಕ ರೆಹಾನ್ (22) ಗಂಭೀರವಾಗಿ ಗಾಯಗೊಂಡು  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕಟ್ಟಡ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.