ಅರವಿಂದ ಕೇಜ್ರಿವಾಲ್
ಪಿಟಿಐ ಚಿತ್ರ
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಲೆ.ಗವರ್ನರ್ ಕಚೇರಿಯ ಪ್ರಕಟಣೆ ಉಲ್ಲೇಖಿಸಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ಎಎಪಿ ಸಂಚಾಲಕ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಲೆ.ಗವರ್ನರ್ ಅನುಮತಿ ನೀಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಡಿಸೆಂಬರ್ 5ರಂದು ಜಾರಿ ನಿರ್ದೇಶನಾಲಯ, ಕೇಜ್ರಿವಾಲ್ ಅವರ ವಿರುದ್ಧ ಕಾನೂನು ಕ್ರಮಕ್ಕೆ ಗವರ್ನರ್ ಅವರ ಅನುಮತಿಯನ್ನು ಕೋರಿತ್ತು.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.