ADVERTISEMENT

ಕೋವಿಡ್‌: ದೆಹಲಿಯಲ್ಲಿ 17 ಸೋಂಕಿತರ ಸಾವು, 22,751 ಹೊಸ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜನವರಿ 2022, 15:21 IST
Last Updated 9 ಜನವರಿ 2022, 15:21 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ 22,751 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 10,179 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಈ ವರೆಗೆ 14,63,837 ಸೋಂಕಿತರು ಗುಣಮುಖರಾಗಿದ್ದಾರೆ.

60,733 ಪ್ರಕರಣಗಳು ಸಕ್ರಿಯವಾಗಿದ್ದು, ಪಾಸಿಟಿವಿಟಿ ದರ ಶೇ 23.53 ರಷ್ಟಿದೆ.

ದೇಶದಾದ್ಯಂತ ಕೋವಿಡ್‌–19 ದೃಢಪಟ್ಟ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದ್ದು, ಶನಿವಾರ 1,59,632 ಹೊಸ ಪ್ರಕರಣಗಳು ದಾಖಲಾಗಿವೆ. 327 ಮಂದಿ ಕೋವಿಡ್‌ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.