ADVERTISEMENT

MCD Election Results: ಎಎಪಿಗೆ ಸ್ಪಷ್ಟ ಬಹುಮತ, 15 ವರ್ಷದ ಬಿಜೆಪಿ ಆಡಳಿತ ಅಂತ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಡಿಸೆಂಬರ್ 2022, 9:04 IST
Last Updated 7 ಡಿಸೆಂಬರ್ 2022, 9:04 IST
ದೆಹಲಿಯಲ್ಲಿ ಎಎಪಿ ಕಾರ್ಯಕರ್ತರ ಸಂಭ್ರಮ –ಪಿಟಿಐ ಚಿತ್ರ
ದೆಹಲಿಯಲ್ಲಿ ಎಎಪಿ ಕಾರ್ಯಕರ್ತರ ಸಂಭ್ರಮ –ಪಿಟಿಐ ಚಿತ್ರ   

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆಮ್ ಆದ್ಮಿ ಪಕ್ಷವು(ಎಎಪಿ) ಸ್ಪಷ್ಟ ಬಹುಮತ ಪಡೆದಿದೆ.

ಇದರೊಂದಿಗೆ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯವಾಗಲಿದ್ದು,ಎಎಪಿಮಹಾನಗರ ಪಾಲಿಕೆ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ.‌

ಮಧ್ಯಾಹ್ನ 2 ಗಂಟೆ ವೇಳೆಗೆ ಎಎಪಿ 126 ಸ್ಥಾನಗಳನ್ನು ಗೆದ್ದಿದೆ, ಬಿಜೆಪಿ 97 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ADVERTISEMENT

ಕಾಂಗ್ರೆಸ್ 7 ಸ್ಥಾನಗಳನ್ನು ಗಳಿಸಿದ್ದು, 3ರಲ್ಲಿ ಮುನ್ನಡೆ ಸಾಧಿಸಿದೆ. ಸ್ವತಂತ್ರ ಅಭ್ಯರ್ಥಿಗಳು 3ರಲ್ಲಿ ಗೆಲುವು ಸಾಧಿಸಿದ್ದಾರೆ.

ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್‌ಗಳಿಗೆ ಡಿಸೆಂಬರ್ 4, ಭಾನುವಾರದಂದು ಮತದಾನ ನಡೆದಿತ್ತು.

ದೆಹಲಿಯಲ್ಲಿ ಎಎಪಿ ಕಾರ್ಯಕರ್ತರ ಸಂಭ್ರಮ –ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.