ನವದೆಹಲಿ: ದೆಹಲಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಏರ್ಪೋರ್ಟ್ ಏಕ್ಸ್ಪ್ರೆಸ್ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರ ಶನಿವಾರ ಪುನರಾರಂಭವಾಗಿದೆ. ಈ ಮೂಲಕ170 ದಿನಗಳ ಬಳಿಕ ದೆಹಲಿ ಮೆಟ್ರೊ ಸೇವೆ ಪೂರ್ಣ ಪ್ರಮಾಣದಲ್ಲಿ ಆರಂಭವಾದಂತಾಗಿದೆ.
‘ಮೊದಲಿನಂತೆ ಬೆಳಿಗ್ಗೆ 6 ರಿಂದ ರಾತ್ರಿ 11ರ ವರೆಗೆ ಮೆಟ್ರೊ ಸೇವೆ ಇರಲಿದೆ. ಕೋವಿಡ್–19 ಹಿನ್ನೆಲೆಯಲ್ಲಿ ಜಾರಿಗೊಳಿಸಿರುವ ಎಲ್ಲ ಮಾರ್ಗಸೂಚಿಗಳನ್ನು ಪ್ರಯಾಣಿಕರು ತಪ್ಪದೇ ಪಾಲಿಸಬೇಕು’ ಎಂದು ದೆಹಲಿ ಮೆಟ್ರೊ ರೇಲ್ ಕಾರ್ಪೊರೇಷನ್ (ಡಿಎಂಆರ್ಸಿ) ಟ್ವೀಟ್ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.