ADVERTISEMENT

ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಆಸ್ಪತ್ರೆಗೆ ದಾಖಲು

ಪಿಟಿಐ
Published 20 ಜೂನ್ 2022, 15:20 IST
Last Updated 20 ಜೂನ್ 2022, 15:20 IST
ಸತ್ಯೇಂದ್ರ ಜೈನ್‌
ಸತ್ಯೇಂದ್ರ ಜೈನ್‌   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಇಲ್ಲಿನ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಸೋಮವಾರ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

57 ವರ್ಷದ ಜೈನ್ ಅವರನ್ನು ಜಾರಿ ನಿರ್ದೇಶನಾಲಯವು(ಇ.ಡಿ) ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಇದೇ ಮೇ 30ರಂದು ಬಂಧಿಸಿದೆ.

ಜೈನ್‌ ಅವರನ್ನು ತಿಹಾರ್ ಜೈಲಿನಿಂದ ಜಿ.ಬಿ ಪಂತ್ ಆಸ್ಪತ್ರೆಗೆ ಕರೆತರಲಾಯಿತು. ನಂತರ ಅವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.