ADVERTISEMENT

ಮತ್ತೊಂದು ವಿಡಿಯೊ: ಜೈಲಿನಲ್ಲಿ 8 ಕೆಜಿ ತೂಕ ಹೆಚ್ಚಿಸಿಕೊಂಡ ಸತ್ಯೇಂದ್ರ ಜೈನ್‌!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ನವೆಂಬರ್ 2022, 10:17 IST
Last Updated 23 ನವೆಂಬರ್ 2022, 10:17 IST
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸತ್ಯೆಂದ್ರ ಜೈನ್‌ ಊಟ ಮಾಡುತ್ತಿರುವ ಸಿಸಿಟಿವಿ ದೃಶ್ಯದ ಸ್ಕ್ರೀನ್‌ಶಾಟ್‌
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸತ್ಯೆಂದ್ರ ಜೈನ್‌ ಊಟ ಮಾಡುತ್ತಿರುವ ಸಿಸಿಟಿವಿ ದೃಶ್ಯದ ಸ್ಕ್ರೀನ್‌ಶಾಟ್‌   

ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖಂಡ ಸತ್ಯೆಂದ್ರ ಜೈನ್‌ ಅವರ ಮತ್ತೊಂದು ಸಿಸಿಟಿವಿ ವಿಡಿಯೊ ತುಣುಕು ಬಹಿರಂಗವಾಗಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಅವರು ಹೊರಗಿನಿಂದ ಊಟ ತರಿಸಿಕೊಂಡು ತಿನ್ನುತ್ತಿರುವುದು ವಿಡಿಯೊದಲ್ಲಿದೆ.

ಇತ್ತೀಚೆಗೆ ಜೈಲಿನಲ್ಲಿ ತಮ್ಮ ಪಾದಗಳಿಗೆ ಮಸಾಜ್‌ ಮಾಡಿಸಿಕೊಳ್ಳುತ್ತಿರುವ ವಿಡಿಯೊ ಜಾಲತಾಣಗಳಲ್ಲಿ ಹರಿದಾಡಿತ್ತು. ಜೈನ್‌ ಅವರಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಸಿಗುತ್ತಿರುವ ವಿಚಾರವಾಗಿ ಸಾಕಷ್ಟು ಟೀಕೆಗಳು ವ್ಯಕ್ತವಾಗಿವೆ.

ADVERTISEMENT

ಜೈನ್‌ ಅವರು ಜೈಲಿನಲ್ಲಿ ಇದ್ದುಕೊಂಡು 8 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರೆ ಎಂದು ಕಾರಾಗೃಹದ ಮೂಲಗಳು ತಿಳಿಸಿವೆ ಎಂದು ಎಎನ್‌ಐ ವರದಿ ಮಾಡಿದೆ. ಜೈನ್‌ ಅವರು 28 ಕೆಜಿ ತೂಕ ಕಳೆದುಕೊಂಡಿರುವುದಾಗಿ ಅವರ ವಕೀಲರು ವಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.