ADVERTISEMENT

₹100 ಕೋಟಿ ವಂಚನೆ ಪ್ರಕರಣ: ಖಾಸಗಿ ಕಂಪನಿಯ ಎಂ.ಡಿ ಬಂಧನ

ಪಿಟಿಐ
Published 25 ಜುಲೈ 2021, 11:20 IST
Last Updated 25 ಜುಲೈ 2021, 11:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಸುಮಾರು ₹100 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸರು ಖಾಸಗಿ ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕರನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.

ಐಎಲ್‌ ಮತ್ತು ಎಫ್‌ಎಸ್‌ ರೈಲ್‌ ಲಿಮಿಟೆಡ್‌ನ ನಿರ್ದೇಶಕ ಮತ್ತು ಐಎಲ್‌ ಮತ್ತು ಎಫ್‌ಎಸ್‌ನ ಸಾರಿಗೆ ನೆಟ್‌ವರ್ಕ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ರಾಮ್‌ಚಂದ್‌ ಕರುಣಾಕರನ್‌ ಬಂಧಿತ ಆರೋಪಿ. ಈತನ ವಿರುದ್ಧ 2018ರಲ್ಲಿ ವಂಚನೆ, ನಕಲಿ ಒಪ್ಪಂದ, ಹಣ ದುರುಪಯೋಗ ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ಪೊಲೀಸರು ಈತನನ್ನು ಜುಲೈ 20ರಂದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡೆಸಿದರು. ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಅವರನ್ನು ಪೊಲೀಸ್‌ ಕಸ್ಟಡಿಗೆ ವಹಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.