ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಈಗ ಡ್ರೋನ್ ಕಣ್ಗಾವಲಿನಲ್ಲಿ ಇದೆ.
ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಇಲ್ಲಿನ ಪೊಲೀಸರು ಡ್ರೋನ್ ಕ್ಯಾಮರಾ ಬಳಸಿ ಜನರನ್ನು ನಿಯಂತ್ರಿಸಲು ಮುಂದಾಗಿದ್ದಾರೆ.
ಲಾಕ್ ಡೌನ್ ಇದ್ದರೂ ಜನರು ಹೊರಗೆ ಬಂದು ಓಡಾಡುತ್ತಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಇದರಿಂದಾಗಿ ಡ್ರೋನ್ ಕ್ಯಾಮರಾ ಬಳಸಿ ಜನರನ್ನು ನಿಯಂತ್ರಿಸಲು ಮುಂದಾಗಿದ್ದಾರೆ.ಏಪ್ರಿಲ್ 9 ರಂದು ದೆಹಲಿಯ ಜಾಮಿಯಾ ಮಸೀದಿ ಪ್ರದೇಶದಲ್ಲಿ ಕ್ಯಾಮರಾ ಬಳಸಿ ಪರಿಶೀಲನೆ ನಡೆಸಿದ್ದಾರೆ. ಅತ್ಯಂತ ಎತ್ತರದ ಪ್ರದೇಶದಿಂದ ಕ್ಯಾಮರಾ ಸಂಚರಿಸಿ ಇಡೀ ದೆಹಲಿಯಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನುಪರಿಶೀಲನೆ ನಡೆಸಲು ಅನುಕೂಲ ಮಾಡಿಕೊಡುತ್ತಿದೆ.
ದೆಹಲಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಅತಿ ಹೆಚ್ಚಾಗುತ್ತಿವೆ. ಇದರಿಂದಾಗಿ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡರೂ ಹರಡುವುದು ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.