ADVERTISEMENT

ಎಐಸಿಸಿ ಕಚೇರಿಗೆ ನುಗ್ಗಿದ ದೆಹಲಿ ಪೊಲೀಸರು: ಕಾಂಗ್ರೆಸ್ ಆರೋಪ

ಐಎಎನ್ಎಸ್
Published 15 ಜೂನ್ 2022, 10:06 IST
Last Updated 15 ಜೂನ್ 2022, 10:06 IST
ದೆಹಲಿಯಲ್ಲಿರುವ ಎಐಸಿಸಿ ಪ್ರಧಾನ ಕಚೇರಿ ಬಳಿ ಪೊಲೀಸ್ ಬಂದೋಬಸ್ತ್ – ಪಿಟಿಐ ಚಿತ್ರ
ದೆಹಲಿಯಲ್ಲಿರುವ ಎಐಸಿಸಿ ಪ್ರಧಾನ ಕಚೇರಿ ಬಳಿ ಪೊಲೀಸ್ ಬಂದೋಬಸ್ತ್ – ಪಿಟಿಐ ಚಿತ್ರ   

ನವದೆಹಲಿ: ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪೈಕಿ ಕೆಲವು ನಾಯಕರು ಹಾಗೂ ಸಂಸದರು, ತಮ್ಮನ್ನು ‘24 ಅಕ್ಬರ್ ರಸ್ತೆ’ಯಲ್ಲಿರುವ ಎಐಸಿಸಿ ಪ್ರಧಾನ ಕಛೇರಿ ಒಳಗೆ ತೆರಳಲು ಪೊಲೀಸರು ಬಿಡುತ್ತಿಲ್ಲ ಎಂದು ದೂರಿದ್ದಾರೆ. ತಮ್ಮನ್ನು ಮನೆಗೆ ತೆರಳಲೂ ಪೊಲೀಸರು ಬಿಡುತ್ತಿಲ್ಲ ಎಂದು ಅನೇಕ ಸಂಸದರು ಆರೋಪಿಸಿದ್ದಾರೆ.

‘ಇಂದು (ಬುಧವಾರ) ದೆಹಲಿ ಪೊಲೀಸರು ಬಲವಂತವಾಗಿ ಎಐಸಿಸಿ ಪ್ರಧಾನ ಕಚೇರಿ ಒಳಕ್ಕೆ ನುಗ್ಗಿದ್ದಾರೆ. ಕಚೇರಿಯ ಬಾಗಿಲನ್ನು ಒಡೆದು ಒಳನುಗ್ಗಿರುವ ಅವರು ನಮ್ಮ ಪೂರ್ವಜರು ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿರುವ ಪ್ರಜಾಪ್ರಭುತ್ವವನ್ನು ತುಳಿದಿದ್ದಾರೆ. ಬಿಜೆಪಿ ಭಾರತದ ಪ್ರಜಾಪ್ರಭುತ್ವದ ಹತ್ಯೆ ಮಾಡಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

‘ನೀವು ಎಐಸಿಸಿ ಕಚೇರಿಯ ಪ್ರವೇಶ ಮತ್ತು ನಿರ್ಗಮನ ದ್ವಾರವನ್ನು ಮುಚ್ಚಿದ್ದೀರಿ. ಇಲ್ಲಿ ಏನು ನಡೆಯುತ್ತಿದೆ’ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಪ್ರಶ್ನಿಸಿದ್ದಾರೆ.

ಆದರೆ, ಕಾಂಗ್ರೆಸ್ ನಾಯಕರ ಆರೋಪಗಳನ್ನು ದೆಹಲಿ ಪೊಲೀಸರು ನಿರಾಕರಿಸಿದ್ದಾರೆ.

ಇದಕ್ಕೂ ಮುನ್ನ, ರಾಹುಲ್ ಗಾಂಧಿಯವರು ಮೂರನೇ ದಿನವೂ ಜಾರಿ ನಿರ್ದೇಶನಾಲಯ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.