ಎಫ್‌ಐಆರ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ಎ.ಐ ವಿಡಿಯೊವನ್ನು ‘ಎಕ್ಸ್’ನಲ್ಲಿ ಬಿತ್ತರಿಸಿದ ಆರೋಪದಡಿ, ದೆಹಲಿ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ.
ಕೃತಕ ಬುದ್ಧಿಮತ್ತೆಯ (ಎ.ಐ) ಈ ಡೀಪ್‌ಫೇಕ್ ವಿಡಿಯೊವು ಮೋದಿ ಮತ್ತು ಅವರ ದಿವಂಗತ ತಾಯಿಯ ವ್ಯಕ್ತಿತ್ವಕ್ಕೆ ಕಳಂಕ ತಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೆಹಲಿ ಬಿಜೆಪಿ ಘಟಕದ ಚುನಾವಣಾ ಕೋಶದ ಸಂಚಾಲಕ ಸಂಕೇತ್ ಗುಪ್ತಾ ಅವರು ನಾರ್ತ್ ಅವೆನ್ಯೂ ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ.
ವಿಡಿಯೊದಲ್ಲಿ ಪ್ರಧಾನಿಯ ವ್ಯಕ್ತಿತ್ವವನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ಮಹಿಳೆಯ ಘನತೆ, ನೈತಿಕತೆ ಮತ್ತು ಕಾನೂನನ್ನು ಉಲ್ಲಂಘಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸೆ. 10ರಂದು ಬಿಹಾರ ಕಾಂಗ್ರೆಸ್ ಘಟಕವು ತನ್ನ ಎಕ್ಸ್ ಖಾತೆಯಲ್ಲಿ ಈ ವಿಡಿಯೊವನ್ನು ಅಪ್‌ಲೋಡ್ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.