ADVERTISEMENT

ಆಲ್ಟ್ ನ್ಯೂಸ್‌ನ ಜುಬೇರ್ ಇಂದು ಬೆಂಗಳೂರಿಗೆ- ಸಾಧ್ಯತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜೂನ್ 2022, 2:12 IST
Last Updated 29 ಜೂನ್ 2022, 2:12 IST
ಮೊಹಮ್ಮದ್‌ ಜುಬೇರ್‌
ಮೊಹಮ್ಮದ್‌ ಜುಬೇರ್‌   

ನವದೆಹಲಿ: ಟ್ವೀಟ್‌ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಫ್ಯಾಕ್ಟ್‌ ಚೆಕಿಂಗ್‌ ವೆಬ್‌ಸೈಟ್‌ 'ಆಲ್ಟ್‌ ನ್ಯೂಸ್' ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್‌ ಜುಬೇರ್‌ ವಿಚಾರಣೆ ತೀವ್ರಗೊಂಡಿದೆ.

ಕಳೆದ ಮೂರು ತಿಂಗಳಿಂದ ಜುಬೇರ್‌ಗೆ ಸಂಬಂಧಿಸಿದ ಸಾಕ್ಷ್ಯ ಕಲೆ ಹಾಕಿರುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಜುಬೇರ್‌ ಬ್ಯಾಂಕ್ ಖಾತೆಗೆ ₹ 50 ಲಕ್ಷ ಫಂಡ್ ಬಂದಿದ್ದು, ಹಣದ ಮೂಲ ಕುರಿತಂತೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಈ ಸಂಬಂಧ ಇಂದು(ಬುಧವಾರ) ಜುಬೇರ್ ಅವರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಜುಬೇರ್‌ ವಿರುದ್ಧ ಐಪಿಸಿ ಸೆಕ್ಷನ್‌ 153ಎ (ಧಾರ್ಮಿಕ, ಜನಾಂಗೀಯ, ಹುಟ್ಟಿದ ಸ್ಥಳ, ಭಾಷೆಯ ಹಿನ್ನೆಯಲ್ಲಿ ಭಿನ್ನ ಗುಂಪುಗಳ ನಡುವೆ ದ್ವೇಷವನ್ನು ಹರಡುವುದು) ಹಾಗೂ 295ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯ) ಅಡಿಯಲ್ಲಿ ಈ ತಿಂಗಳ ಆರಂಭದಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಈ ಸಂಬಂಧ ಜುಬೇರ್ ಅವರನ್ನು ನಿನ್ನೆ ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ, ದೆಹಲಿಯ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧ ಸರ್ವಾರಿಯಾ ಅವರ ಮುಂದೆ ಹಾಜರುಪಡಿಸಲಾಗಿತ್ತು. ಬಳಿಕ, ಜುಬೇರ್ ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.