ADVERTISEMENT

ದೆಹಲಿ | ₹1.78 ಕೋಟಿ ಮೌಲ್ಯದ ಡ್ರಗ್ಸ್ ಡೀಲರ್‌ ಅಕ್ರಮ ಆಸ್ತಿ ಜಪ್ತಿ

ಪಿಟಿಐ
Published 22 ಫೆಬ್ರುವರಿ 2025, 11:20 IST
Last Updated 22 ಫೆಬ್ರುವರಿ 2025, 11:20 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಉತ್ತರ ದೆಹಲಿಯ ಹೊರವಲಯದ ಭಲ್ಸ್ವಾ ಡೈರಿ ಪ್ರದೇಶದಲ್ಲಿ ಮಾದಕವಸ್ತು ಡೀಲರ್‌ಗೆ ಸಂಬಂಧಿಸಿದ ಸುಮಾರು ₹1.78ಕೋಟಿ ಮೌಲ್ಯದ ಅಕ್ರಮ ಆಸ್ತಿಯನ್ನು ದೆಹಲಿ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ತಸ್ಲೀಮಾ ಅಲಿಯಾಸ್‌ ಪುಟ್ಟಿ ಎಂಬಾತನನ್ನು 2024ರ ಜೂನ್‌ನಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ 400 ಗ್ರಾಂ ಹೆರಾಯಿನ್‌ನೊಂದಿಗೆ ಬಂಧಿಸಲಾಗಿತ್ತು. ತನಿಖೆಯ ಭಾಗವಾಗಿ ಮಾದಕವಸ್ತು ಕಳ್ಳಸಾಗಣೆ ಜಾಲದ ಕುರಿತು ಶೋಧ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಏಳು ಕಡೆಗಳಲ್ಲಿ ತಸ್ಲೀಮಾ ಅವರಿಗೆ ಸಂಬಂಧಿಸಿದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ. ಇದರ ಮೌಲ್ಯ ₹1.78 ಕೋಟಿಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ADVERTISEMENT

ಮಾದಕವಸ್ತು ಕಳ್ಳಸಾಗಣೆಯಿಂದ ಬಂದ ಹಣವನ್ನು ಬಳಸಿ ಈ ಆಸ್ತಿಗಳನ್ನು ಖರೀದಿಸಲಾಗಿದೆ ಎಂದು ಶಂಕಿಸಲಾಗಿದೆ. ಈ ಆಸ್ತಿಗಳನ್ನು 1985ರ ಎನ್‌ಡಿಪಿಎಸ್‌ ಕಾಯ್ದೆಯ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್‌ ಆಯುಕ್ತ ನಿಧಿ ವಲ್ಸನ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.