ADVERTISEMENT

ಟಿಕ್ರಿ ಗಡಿಯಲ್ಲಿ ಪೊಲೀಸ್‌ ಪೇದೆ ಮೇಲೆ ಹಲ್ಲೆ

ಪಿಟಿಐ
Published 13 ಫೆಬ್ರುವರಿ 2021, 4:39 IST
Last Updated 13 ಫೆಬ್ರುವರಿ 2021, 4:39 IST
ಸಾಂದರ್ಭಿಕ ಚಿತ್ರ (ಕೃಪೆ: ಐಸ್ಟಾಕ್)
ಸಾಂದರ್ಭಿಕ ಚಿತ್ರ (ಕೃಪೆ: ಐಸ್ಟಾಕ್)   

ನವದೆಹಲಿ: ಟಿಕ್ರಿ ಗಡಿಯಲ್ಲಿ ಪೊಲೀಸ್ ಪೇದೆಯೊಬ್ಬರ ಮೇಲೆ ಹಲ್ಲೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾಗಿರುವ ರೈತರ ಕುರಿತು ಭಿತ್ತಿಪತ್ರ ಅಂಟಿಸಲು ಹೋಗಿದ್ದಾಗ ಹಲ್ಲೆ ನಡೆದಿದೆ.

ಹಲ್ಲೆಗೊಳಗಾದ ಪೊಲೀಸ್ ಪೇದೆಯನ್ನು ಜಿತೇಂದರ್ ರಾಣ ಎಂದು ಗುರುತಿಸಲಾಗಿದ್ದು, ಅವರು ನಾಗೊಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದರು. ಜಿತೇಂದರ್ ಅವರ ತಲೆಗೆ ಹಾಗೂ ಇತರ ಅಂಗಾಂಗಗಳಿಗೆ ಗಾಯಗಳಾಗಿವೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ರ್‍ಯಾಲಿ ವೇಳೆ ನಡೆದ ಹಿಂಸಾಚಾರದ ಸಂದರ್ಭ ನಾಪತ್ತೆಯಾದ ರೈತರ ಕುರಿತ ಭಿತ್ತಿಪತ್ರ ಅಂಟಿಸಲು ಜಿತೇಂದರ್ ಅವರು ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದರು. ಹಲ್ಲೆಯಿಂದ ಗಾಯಗೊಂಡಿರುವ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.