ADVERTISEMENT

'ಇಂಡಿಯಾ' ಮೈತ್ರಿ ಭಿನ್ನಾಭಿಪ್ರಾಯದಿಂದ ಬಿಜೆಪಿಗೆ ಜಯ: ಸಿಪಿಎಂ, ಮುಸ್ಲಿಂ ಲೀಗ್

ಪಿಟಿಐ
Published 8 ಫೆಬ್ರುವರಿ 2025, 12:22 IST
Last Updated 8 ಫೆಬ್ರುವರಿ 2025, 12:22 IST
<div class="paragraphs"><p>ಸಿಪಿಎಂ, ಮುಸ್ಲಿಂ ಲೀಗ್</p></div>

ಸಿಪಿಎಂ, ಮುಸ್ಲಿಂ ಲೀಗ್

   

ತಿರುವನಂತಪುರ: ‘ಇಂಡಿಯಾ’ ಮೈತ್ರಿಕೂಟದಲ್ಲಿನ ಭಿನ್ನಾಭಿಪ್ರಾಯಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಪಕ್ಷ ಗೆಲ್ಲಲು ದಾರಿ ಮಾಡಿಕೊಟ್ಟಿವೆ ಎಂದು ಸಿಪಿಐ(ಎಂ) ಮತ್ತು ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ (ಐಯುಎಂಎಲ್‌) ಹೇಳಿವೆ.

ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಸಿಪಿಐ(ಎಂ)ನ ನಾಯಕ ಟಿ.ಪಿ.ರಾಮಕೃಷ್ಣನ್‌, ‘ಇಂಡಿಯಾ’ ಮೈತ್ರಿಕೂಟದ ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಕಾಂಗ್ರೆಸ್‌ ಉತ್ತಮ ಬೆಂಬಲ ನೀಡಲಿಲ್ಲ. ಪಕ್ಷವು ಸರಿಯಾದ ಉಪಕ್ರಮವನ್ನು ತೆಗೆದುಕೊಂಡಿದ್ದರೆ, ಮೈತ್ರಿಕೂಟವು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದಿತ್ತು. ಆದರೆ, ಕಾಂಗ್ರೆಸ್‌ ತನ್ನ ಜವಾಬ್ದಾರಿಯನ್ನು ಪೂರೈಸಲಿಲ್ಲ’ ಎಂದು ಆರೋಪಿಸಿದ್ದಾರೆ.

ADVERTISEMENT

‘ಇಂಡಿ’ ಮೈತ್ರಿಕೂಟವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವಲ್ಲಿ ಕಾಂಗ್ರೆಸ್‌ ಅನುಕೂಲಕರ ನಿಲುವನ್ನು ಅಳವಡಿಸಿಕೊಂಡಿಲ್ಲ. ಬದಲಿಗೆ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಲುವನ್ನು ಅಳವಡಿಸಿಕೊಂಡರು ಎಂದು ರಾಮಕೃಷ್ಣನ್‌ ಹೇಳಿದ್ದಾರೆ.

‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಿದ್ದರೆ, ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಯಶಸ್ವಿಯಾಗಿ ತಡೆಯಬಹುದಿತ್ತು ಎಂದು ಐಯುಎಂಎಲ್‌ ಹೇಳಿದೆ.

‘ಇಂಡಿ’ ಮೈತ್ರಿಕೂಟದ ಪಕ್ಷಗಳು ಒಗ್ಗಟ್ಟಿನಿಂದ ನಿಂತಿದ್ದರೆ ಇದು ಸಂಭವಿಸುತ್ತಿರಲಿಲ್ಲ. ದೇಶದ ಯಾವುದೇ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಬಲವಾದ ಮತ ನೆಲೆ ಇಲ್ಲ. ಅದು ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಜಾತ್ಯಾತೀತ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬಳಸಿಕೊಳ್ಳುತ್ತಿತ್ತು. ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಇಂಡಿಯಾ’ ಮೈತ್ರಿಕೂಟದಲ್ಲಿನ ಭಿನ್ನಾಭಿಪ್ರಾಯಗಳು ದೆಹಲಿ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸಹಾಯ ಮಾಡಿತು. ಎಲ್ಲರೂ ಒಟ್ಟಾಗಿ ನಿಂತಿದ್ದರೆ ಫಲಿತಾಂಶ ಬೇರೆಯೇ ಆಗಿರುತ್ತಿತ್ತು ಎಂದು ಐಯುಎಂಎಲ್‌ನ ನಾಯಕ ಪಿ.ಕೆ.ಕುಂಞಾಲಿಕುಟ್ಟಿ ಹೇಳಿದ್ದಾರೆ.

ಸಿಪಿಐ(ಎಂ) ಮತ್ತು ಐಯುಎಂಎಲ್ ಎರಡೂ ಪಕ್ಷಗಳು ‘ಇಂಡಿ’ ಕೂಟದ ಮೈತ್ರಿ ಪಕ್ಷಗಳಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.