ADVERTISEMENT

ದೆಹಲಿ ಚುನಾವಣೆ: 150ಕ್ಕೂ ಹೆಚ್ಚು ಅರೆಸೇನಾ ಪಡೆ, 30,000 ಪೊಲೀಸರ ನಿಯೋಜನೆ

ಪಿಟಿಐ
Published 3 ಫೆಬ್ರುವರಿ 2025, 12:21 IST
Last Updated 3 ಫೆಬ್ರುವರಿ 2025, 12:21 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಫೆಬ್ರುವರಿ 5ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆ 150ಕ್ಕೂ ಹೆಚ್ಚು ಅರೆಸೇನಾ ಪಡೆಗಳು ಮತ್ತು 30,000ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಪಿಟಿಐ ವಿಡಿಯೊದಲ್ಲಿ ಮಾತನಾಡಿರುವ ದೆಹಲಿ ಚುನಾವಣಾ ವಿಭಾಗದ ಉಸ್ತುವಾರಿ ದೇವೇಶ್‌ ಚಂದ್ರ ಶ್ರೀವಾಸ್ತವ್‌, ಚುನಾವಣಾ ಪೂರ್ವ ಸಿದ್ಧತೆಗಳನ್ನು ಈಗಾಗಲೇ ಮಾಡಲಾಗಿದೆ. ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆ ನಡೆಯುವಂತೆ ನೋಡಿಕೊಳ್ಳಲು ದೆಹಲಿ ಪೊಲೀಸರು ಬದ್ಧರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ADVERTISEMENT

ದೆಹಲಿಯಾದ್ಯಂತ ಸುಮಾರು 3,000 ಮತಗಟ್ಟೆ ಕೇಂದ್ರಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿದ್ದು, ಹೆಚ್ಚುವರಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗುವುದು. ಕೆಲವು ಸ್ಥಳಗಳಲ್ಲಿ ಡ್ರೋನ್‌ಗಳನ್ನು ಬಳಸಲಾಗುವುದು. ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ತ್ವರಿತ ಪ್ರತಿಕ್ರಿಯೆ ತಂಡಗಳನ್ನು (ಕ್ಯೂಆರ್‌ಟಿ) ನಿಯೋಜಿಸಲಾಗುವುದು ಎಂದು ಶ್ರೀವಾಸ್ತವ್‌ ತಿಳಿಸಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದ್ದು, ಫೆ.8ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.