
ನವದೆಹಲಿ: ಮಾಲಿನ್ಯ ನಿಯಂತ್ರಣ (ಪಿಯುಸಿ) ಪ್ರಮಾಣಪತ್ರವಿಲ್ಲದ ವಾಹನಗಳಿಗೆ ಡಿಸೆಂಬರ್ 18ರಿಂದ ರಾಷ್ಟ್ರ ರಾಜಧಾನಿಯ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ತುಂಬಲು ಅವಕಾಶ ಇರುವುದಿಲ್ಲ ಎಂದು ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಮಂಗಳವಾರ ಹೇಳಿದ್ದಾರೆ.
ಪಿಯುಸಿ ಮಾನದಂಡಗಳನ್ನು ಪಾಲಿಸಲು ವಾಹನ ಮಾಲೀಕರಿಗೆ ಒಂದು ದಿನದ ಕಾಲಾವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪೆಟ್ರೋಲ್ ಪಂಪ್‌ಗಳಲ್ಲಿ ಅಳವಡಿಸಲಾದ ಕ್ಯಾಮೆರಾಗಳು ಸ್ವಯಂ ಚಾಲಿತವಾಗಿ ಪಿಯುಸಿ ಪ್ರಮಾಣಪತ್ರ ಇಲ್ಲದ ವಾಹನಗಳ್ನು ಪತ್ತೆ ಹಚ್ಚಲಿವೆ. ಗುರುವಾರದಿಂದ ಅಂತಹ ವಾಹನಗಳಿಗೆ ಯಾವುದೇ ಗೊಂದಲವಿಲ್ಲದೆ ಇಂಧನ ನಿರಾಕರಿಸಲಾಗುತ್ತದೆ ಎಂದು ಸಿರ್ಸಾ ಹೇಳಿದ್ದಾರೆ.
‘ಪಿಯುಸಿ ಪ್ರಮಾಣಪತ್ರಗಳನ್ನು ಹೊಂದಿರದ 8 ಲಕ್ಷಕ್ಕೂ ಹೆಚ್ಚು ವಾಹನ ಮಾಲೀಕರಿಗೆ ಈಗಾಗಲೆ ದಂಡ ವಿಧಿಸಲಾಗಿದೆ. ಗುರುವಾರದಿಂದ ಮತ್ತು ಮುಂದಿನ ಆದೇಶದವರೆಗೆ ದೆಹಲಿಯ ಹೊರಗಿನಿಂದ ಬರುವ ಬಿಎಸ್–6 ಮಾನದಂಡಗಳಿಗೆ ಅನುಗುಣವಾಗಿ ಸಿದ್ಧಪಡಿಸಲಾದ ವಾಹನಗಳಿಗೆ ಮಾತ್ರ ನಗರವನ್ನು ಪ್ರವೇಶಿಸಲು ಅವಕಾಶ ನೀಡಲಾಗುವುದು’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.